This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್​ಗೆ ರಾಜ್ಯದ ಹೈಕೋರ್ಟ್ ಆದೇಶ ಮಾಡಿದೆ: ಚಲುವರಾಯಸ್ವಾಮಿ ಸಮರ್ಥನೆ

ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್​ಗೆ ರಾಜ್ಯದ ಹೈಕೋರ್ಟ್ ಆದೇಶ ಮಾಡಿದೆ: ಚಲುವರಾಯಸ್ವಾಮಿ ಸಮರ್ಥನೆ

ಮಂಡ್ಯ: ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್​ಗೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟಿಂಗ್​ಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. 6 ತಿಂಗಳ ಒಳಗೆ ಟ್ರಯಲ್ ಬ್ಲಾಸ್ಟ್ ಮಾಡಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ರೈತರನ್ನು ವಿಶ್ವಾಸಕ್ಕೆ ತೆಗದುಕೊಂಡು ಟ್ರಯಲ್ ಬ್ಲಾಸ್ಟ್ ಮಾಡಲಿದ್ದೇವೆ. ಯಾವುದಕ್ಕೂ, ಯಾರಿಗೂ ತೊಂದರೆ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ರೈತರನ್ನು ಕರೆದು ಈ‌ ಬಗ್ಗೆ ಮಾತಾಡುತ್ತೇವೆ ಎಂದು ಅವರು ತಿಳಿಸಿದರು.

ಟ್ರಯಲ್ ಬ್ಲಾಸ್ಟ್ ಮಾಡಿಸಿ ನಂತರ ಕಲ್ಲು ಗಣಿಗಾರಿಕೆಗೆ ಅನುಮತಿ ಕೊಡುತ್ತಾರೆ ಎಂಬ ಆತಂಕ ಕೆಲವರಲ್ಲಿ ಇದೆ. ರೈತರು ಹೈಕೋರ್ಟ್ ಆದೇಶವನ್ನು ಮನ್ನಿಸಬೇಕು ಎಂಬುದಾಗಿ ಮನವಿ ಮಾಡುತ್ತಿದ್ದೇನೆ ಎಂದು ಚಲುವರಾಯಸ್ವಾಮಿ ಹೇಳಿದರು.

Nimma Suddi
";