ಮಂಡ್ಯ: ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ಗೆ ಕರ್ನಾಟಕ ಹೈಕೋರ್ಟ್ ಆದೇಶ ಮಾಡಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, ಟ್ರಯಲ್ ಬ್ಲಾಸ್ಟಿಂಗ್ಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. 6 ತಿಂಗಳ ಒಳಗೆ ಟ್ರಯಲ್ ಬ್ಲಾಸ್ಟ್ ಮಾಡಬೇಕು ಎಂದು ಹೈಕೋರ್ಟ್ ಸೂಚಿಸಿದೆ.
ರೈತರನ್ನು ವಿಶ್ವಾಸಕ್ಕೆ ತೆಗದುಕೊಂಡು ಟ್ರಯಲ್ ಬ್ಲಾಸ್ಟ್ ಮಾಡಲಿದ್ದೇವೆ. ಯಾವುದಕ್ಕೂ, ಯಾರಿಗೂ ತೊಂದರೆ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ರೈತರನ್ನು ಕರೆದು ಈ ಬಗ್ಗೆ ಮಾತಾಡುತ್ತೇವೆ ಎಂದು ಅವರು ತಿಳಿಸಿದರು.
ಟ್ರಯಲ್ ಬ್ಲಾಸ್ಟ್ ಮಾಡಿಸಿ ನಂತರ ಕಲ್ಲು ಗಣಿಗಾರಿಕೆಗೆ ಅನುಮತಿ ಕೊಡುತ್ತಾರೆ ಎಂಬ ಆತಂಕ ಕೆಲವರಲ್ಲಿ ಇದೆ. ರೈತರು ಹೈಕೋರ್ಟ್ ಆದೇಶವನ್ನು ಮನ್ನಿಸಬೇಕು ಎಂಬುದಾಗಿ ಮನವಿ ಮಾಡುತ್ತಿದ್ದೇನೆ ಎಂದು ಚಲುವರಾಯಸ್ವಾಮಿ ಹೇಳಿದರು.