This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ: ಸಿಟಿ ರವಿ

ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ: ಸಿಟಿ ರವಿ

ಬೆಂಗಳೂರು,: ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂಬ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಬಿಜೆಪಿ ನಾಯಕ ಸಿಟಿ ರವಿ ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತಂಗಡಗಿಯನ್ನು ಸಂಪುಟದಿಂದ ಸಿಎಂ ಸಿದ್ದರಾಮಯ್ಯ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ್ದ ತಂಗಡಗಿ, ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ. ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದರು.

ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಸಚಿವರ ಹೇಳಿಕೆ ಇದು ಕನ್ನಡ ಸಂಸ್ಕೃತಿ ಇಲಾಖೆಗೆ ಮಾಡಿದ ಅಪಚಾರ. ಅವರ ಹೇಳಿಕೆಗೆ ಪ್ರತಿಯಾಗಿ, ‘ಬಾರಪ್ಪ ನಿಮ್ಮಪ್ಪನಿಗೆ ಹುಟ್ಟಿದ್ದರೆ ಹೊಡಿ’ ಎಂದು ಹೇಳಬೇಕು ಅಂದುಕೊಂಡಿದ್ದೆ. , ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ. ಇಂಥವರನ್ನು ಸಂಪುಟದಲ್ಲಿ ಇಟ್ಟುಕೊಳ್ಳಬಾರದು ಎಂದು ಸೂಚಿಸಿದರು.

 

 

";