This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಪೌರ ಕಾರ್ಮಿಕ ಹುದ್ದೆ ಕಾಯಂಗೆ ಪ್ರಸ್ತಾವನೆ:ಶಿವಣ್ಣ ಕೋಟೆ

ನಿಮ್ಮ ಸುದ್ದಿ ಬಾಗಲಕೋಟೆ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಹುದ್ದೆ ಖಾಯಂಗೆ ಸರಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಕೋಟೆ ಹೇಳಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಬೇಕಾದರೆ, ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಿಬೇಕಾಗಿದೆ. ಈ ಕುರಿತು 15 ಸದಸ್ಯರನ್ನೊಳಗೊಂಡ ಸಮಿತಿಯಲ್ಲಿ ಸಭೆಯನ್ನು ಮಾಡಲಾಗಿ ಸರಕಾರಕ್ಕೆ ಮೂರು ವರದಿಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಈಗಾಗಲೇ ಮೊದಲನೇ ಹಂತದಲ್ಲಿ 11133 ಪೌರ ಕಾರ್ಮಿಕರನ್ನು ಖಾಯಂಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಉಳದಿ 26 ಸಾವಿರ ಜನರನ್ನು ಎರಡನೇ ಹಂತದಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ಪೌರ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗೆಳ ಪ್ರತಿಭಾ ಪುರಸ್ಕಾರ ನೀಡುವ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ. ಈಗಾಗಲೇ 16 ಜಿಲ್ಲೆಗಳ ಪ್ರವಾಸ ಕೈಗೊಂಡು ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಗಿದೆ. ಪೌರ ಕಾರ್ಮಿಕ ಕಾರ್ಯ ಅವಶ್ಯವಾಗಿದ್ದು, ಅವರಿಲ್ಲದ ಕ್ಷೇತ್ರಗಳಿಲ್ಲ. ಹಗಲಿರುಳೆನ್ನದೇ ಬಿಸಿಲು, ಮಳೆ, ಗಾಳಿ ಎನ್ನದೇ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರಧಾನಮಂತ್ರಿಗಳ ಸ್ವಚ್ಚ ಭಾರತ ಯೋಜನೆಯಲ್ಲಿ ಪೌರ ಕಾರ್ಮಿಕರ ವಿಶೇಷ ಸ್ಥಾನ ಕಲ್ಪಿಸಲಾಗಿದ್ದು, ಅದಕ್ಕಾಗಿ ಪ್ರಶಸ್ತಿಗಳನ್ನು ಸಹ ನೀಡಲಾಗುತ್ತಿದೆ ಎಂದರು.

ಅನಿವಾರ್ಯವಾಗಿ ಮ್ಯಾನುವನ್ ಸ್ಕ್ಯಾವೆಂಜರ ಮಾಡುವ ಕಾರ್ಯದಲ್ಲಿ 48 ಪರಿಕರಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಒಂದು ವೇಳೆ ಉಪಯೋಗಿಸದೇ ಇದ್ದಲ್ಲಿ ಅಧಿಕಾರಿಗಳ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವಾಗ ಸಾರ್ವಜನಿಕರಾಗಲಿ, ಅಧಿಕಾರಿಗಳಾಗಲಿ ತೊಂದರೆ ಕೊಟ್ಟಲ್ಲಿ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ದ ನಿಷ್ಪಕ್ಷಪಾತವಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಈ ಕುರಿತು ಈಗಾಗಲೇ 350 ಪ್ರಕರಣಗಳು ತನಿಖೆಯಲ್ಲಿವೆ ಎಂದರು.

ಓಡಿಸ್ಸಾ ರಾಜ್ಯದಲ್ಲಿ ಈಗಾಗಲೇ ಗರಿಮಾ ಯೋಜನೆಯಡಿ ಪೌರ ಕಾರ್ಮಿಕರ ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಾಣ ಮಾಡಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮಾತನಾಡಿ ಮಾನವ ರಹಿತ ಸ್ವಚ್ಚತಾ ಕಾರ್ಯಕ್ಕಾಗಿ ಈಗಾಗಲೇ ಕೇರಳ ಹಾಗೂ ಆಂದ್ರ ರಾಜ್ಯಗಳಲ್ಲಿ ರೋಬೋಟ್ ತಂತ್ರಜ್ಞಾನ ಬಳಕೆಯಾಗುತ್ತಿದ್ದು, ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಸಭೆಗಳಲ್ಲಿ ರೋಬೋಟ್‍ಗಳ ಬೇಡಿಕೆ ಇದ್ದು, ಖರೀದಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು. ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಉಪಸ್ಥಿತರಿದ್ದರು.

*ಅಮೀನಗಡ : ವಿವಿದೆಡೆ ವಿದ್ಯುತ್ ವ್ಯತ್ಯಯ*
————————————-
: ಹುನಗುಂದ ತಾಲೂಕಿನ 33/11 ಕೆವಿ ಅಮೀನಗಡ ಉಪ ಕೇಂದ್ರದ ವ್ಯಾಪ್ತಿಯಲ್ಲಿ 400 ಕೆವಿ, ಡಿಸಿ ಕೊಪ್ಪಳ-ನರೇಂದ್ರ ಪ್ರಸರಣ ಮಾರ್ಗದ ವಾಹಕಗಳ ಎಳೆಯುವ ಕಾಮಗಾರಿ ಪ್ರಯುಕ್ತ ಜನವರಿ 24, 25, 27 ಹಾಗೂ 28 ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ವರೆಗೆ 33/11 ಕೆವಿ ಅಮೀನಗಡ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳಾದ ಎಫ್-07 ಅಮೀನಗಡ, ಎಫ್-03 ರಕ್ಕಸಗಿ ಎನ್‍ಜೆವಾಯ್, ಎಫ್-04 ಐಹೊಳೆ ಆಯ್‍ಪಿ, ಎಫ್-05 ಮೈನ್ಸ್, ಎಫ್-06 ಕೆಲೂರ ಎನ್‍ಜೆವಾಯ್, ಎಫ್-07 ಐಹೊಳೆ ವಾಟರ್ ಸಪ್ಲೈ ವಿದ್ಯುತ್ ಮಾರ್ಗಗಳ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಾಗಲಕೋಟೆ ಹೆಸ್ಕಾಂ ಕಾರ್ಯನಿವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nimma Suddi
";