ದೆಹಲಿ, : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಅವರು ಇಂದು (ಫೆ.17) ದೆಹಲಿ ನ್ಯಾಯಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇಡಿ ಅವರಿಗೆ ಸಮನ್ಸ್ ನೀಡಿತ್ತು ಒಂದಕ್ಕೂ ಉತ್ತರ ನೀಡಿಲ್ಲ.ಕೋರ್ಟ್ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು. ಕೋರ್ಟ್ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.
ದೆಹಲಿಯಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದ್ದು, ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು ಅದಕ್ಕಾಗಿ ಕೋರ್ಟ್ ವಿಚಾರಣೆಗೆ ಅವರು ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದಾರೆ ಎಂದು ಕೇಜ್ರಿವಾಲ್ ಪರ ವಕೀಲರು ಹೇಳಿದ್ದಾರೆ.
ಮುಂದಿನ ಕೋರ್ಟ್ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುದಾಗಿ ಹೇಳಿದ್ದಾರೆ. ಕೇಜ್ರಿವಾಲ್ ಅವರು ಈ ಮನವಿಯನ್ನು ಕೋರಿ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಲಾಗಿದ್ದು, ನ್ಯಾಯಲಯವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ. ಈ ಹಿಂದೆ ಇಡಿ ನೀಡಿದ ಆರು ಸಮನ್ಸ್ಗೆ ಉತ್ತರ ನೀಡದ ಕೇಜ್ರಿವಾಲ್ ವಿರುದ್ಧ ಇಡಿ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ಈ ದೂರಿನ ಆಧಾರದ ಮೇಲೆ ಫೆ.16ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು ಎಂದು ಮಾಹಿತಿ ಕಂಡು ಬಂದಿದೆ.