This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime NewsInternational NewsNational NewsPolitics NewsState News

ಸಂಸದ್ ಭವನದ ಮೇಲಿನ ದಾಳಿಗೆ ಸಿಎಂ ಖಂಡನೆ‌

ಸಂಸದ್ ಭವನದ ಮೇಲಿನ ದಾಳಿಗೆ ಸಿಎಂ ಖಂಡನೆ‌

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ Amit Shah ಅವರ ಕರ್ತವ್ಯವಾಗಿದೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ Bharatiya Janata Party (BJP) ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ Pratap Simha ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ Narendra Modi ಅವರದ್ದಾಗಿದೆ ಎಂದಿದ್ದಾರೆ.

Nimma Suddi
";