This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಮೋದಿ ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೋದಿ ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ಇದೇ ವೇಳೆ ಬಿಜೆಪಿಯಿಂದ ಕುರುಬರಿಗೆ ಟಿಕೆಟ್ ನೀಡದ ಮೋದಿ ಕಂಬಳಿ ಹಾಕಿಕೊಂಡು ನಾಟಕ ಮಾಡ್ತಾರೆ ಎಂದು ಆರೋಪಿಸಿದರು.

ಬಾಗಲಕೋಟೆ ಲೋಕಸಭಾ ಕ್ಷೇತ್ರ ದಲ್ಲಿ ಗುರುವಾರ ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

";