This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

National NewsPolitics NewsState News

ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ:  ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಹೆಸರು ಕೇಳಿಬಂದಿರುವುದರಿಂದ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಶುಕ್ರವಾರ ವರದಿಯಾಗಿತ್ತು. ಇದೀಗ ಸಿಎಂ ಅದನ್ನು ಅಲ್ಲಗಳೆದಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂಗೆ ನಾಗೇಂದ್ರ ಬೆದರಿಕೆಯೊಡ್ಡಿದ್ದಾರೆಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವ ಬೆದರಿಕೆಯೂ ಇಲ್ಲವೆಂದರು. ಸಚಿವ ನಾಗೇಂದ್ರ ಬಳಿಯಿಂದ ನಾವು ಯಾವುದೇ ವಿವರಣೆ ಕೇಳಿಲ್ಲ. ರಾಜೀನಾಮೆಗೆ ಗಡುವು ಕೊಡಲು ಬಿಜೆಪಿಗರು ಯಾರು? ವಿಪಕ್ಷ ಇರುವುದು ಹೋರಾಟ ಮಾಡಲು ಎಂದು ಸಿದ್ದರಾಮಯ್ಯ ಹೇಳಿದರು.

ಜೂನ್ 13ರಂದು ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆಯಲಿರುವ ಚುನಾವಣೆಗೆ ನಮ್ಮ ಪಕ್ಷದಿಂದ 7 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್​ನ 7 ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. 9-20 ಮತಗಳು ಬೇಕು, ನಮ್ಮ ಸಂಖ್ಯಾಬಲದ ಮೇಲೆ ಗೆಲ್ಲುತ್ತೇವೆ. ಬಿಜೆಪಿಯ ಮೂವರು, ಜೆಡಿಎಸ್​​​ನ ಓರ್ವ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಎಕ್ಸಿಟ್​ ಪೋಲ್​ನಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಎಕ್ಸಿಟ್ ಪೋಲ್ ಅನ್ನು ಒಪ್ಪುವುದಿಲ್ಲ. ಕರ್ನಾಟಕದಲ್ಲಿ ನಾವು 15-20 ಸ್ಥಾನ ಗೆಲ್ಲುತ್ತೇವೆ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಸಹ ಎಕ್ಸಿಟ್ ​​ಪೋಲ್ ದಿನವೇ ಈ ರೀತಿ ಪ್ರತಿಕ್ರಿಯಿಸಿದ್ದು, ಎಸ್‌ಐಟಿ ರಚನೆಯಾಗಿ ಇನ್ನೂ ಎರಡು ದಿವಸ ಆಗಿದೆಯಷ್ಟೆ. ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ವರದಿ ನೀಡಿಲ್ಲ ಎಂದರು.