This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ

ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದ್ದು, ಇದಕ್ಕೆ ಕಲುಷಿತ ನೀರು ಕಾರಣ ಎಂದು ಮಾಹಿತಿ ತಿಳಿದು ಬಂದಿದೆ.

ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆ ಸಂಭವಿಸಿದೆ.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆ ಆದರೆ ಡಿಸಿಗಳೇ ನೇರ ಹೊಣೆ. ಕಾಲರಾ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು‌ ಎಚ್ಚರಿಕೆ ನೀಡಿದರು.

ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿದ್ದು, ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಮಳೆ ವಾಡಿಕೆಗಿಂತ ಅಧಿಕವಾಗಿದೆ, ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು.

ನೀತಿ ಸಂಹಿತೆ ಜೂನ್ 6ರವರೆಗೆ ಇದ್ದು, ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಇದಕ್ಕೆ ಯಾರು ಜವಾಬ್ದಾರಿ? ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ಆಗಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ,‌ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Nimma Suddi
";