ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದ್ದು, ರಾಜ್ಯಗಳಿಂದ ನಾವು 100 ರೂ. ತೆರಿಗೆ ಹಣವನ್ನು ಸಂಗ್ರಹಿಸಿ ಕೊಟ್ಟರೆ, ಕೇಂದ್ರ ಸರ್ಕಾರದಿಂದ ನಮಗೆ ಕೇವಲ 12 ರಿಂದ 13 ರೂ. ತೆರಿಗೆ ಹಣವನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ವಿರುದ್ಧ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮದು ರಾಜಕೀಯ ಚಳುವಳಿಯಲ್ಲ. ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ ಎಂದರು.
ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಇದು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು. ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ಎಂದು ಹೇಳಿದರು.