ಬೆಂಗಳೂರು: ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ, 10 ಸಾವಿರ ರೂ. ದಂಡ ವಿಧಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.ಮಾರ್ಚ್ 7 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮಾರ್ಚ್ 11 ರಂದು ಸಚಿವ ಎಂ.ಬಿ.ಪಾಟೀಲ್, ಮಾರ್ಚ್ 15 ರಂದು ಸಚಿವ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಅನಗತ್ಯವಾಗಿ ಪಿಎಸ್ಐ ಕು.ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮತ್ತಿತರರಿಗೆ ನ್ಯಾಯಾಲಯ 10 ಸಾವಿರ ದಂಡ ವಿಧಿಸಿದೆ.ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದು, ಆದರೆ, ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿತು ಎಂದು ಮಾಹಿತಿ ಬೆಳಕಿಗೆ ಬಂದಿದೆ.