This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Politics News

ರೈತರಿಗೆ ಪೂರಕವಾದ ಸಂಶೋಧನೆಗಳು ನಡೆಯಲಿ : ಸಿಎಂ ಯಡಿಯೂರಪ್ಪ

ನಿಮ್ಮ ಸುದ್ದಿ ಬಾಗಲಕೋಟೆ

ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ತೋವಿವಿಯ ವಿಜ್ಞಾನಿಗಳು ಹೆಚ್ಚು ಹೆಚ್ಚು ಸಂಶೋಧನೆಗಳನ್ನು ನಡೆಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ತೋವಿವಿಯ ಉದ್ಯಾನಗಿರಿಯಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ತೋಟಗಾರಿಕೆ ಮೇಳಕ್ಕೆ ಆನ್‌ಲೈನ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ತೋಟಗಾರಿಕಾ ಉತ್ಪಾಧನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ೨ನೇ ಸ್ಥಾನದಲ್ಲಿದ್ದು, ತೋಟಗಾರಿಕೆ ಕ್ಷೇತ್ರದ ಸಾಧನೆಯಿಂದ ಭಾರತದ ತೋಟಗಾರಿಕೆ ತೋಟಗಾರಿಕೆ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ. ೪೪೮೭೯ ಕೋಟಿ ರೂ.ಗಳ ಆದಾಯವನ್ನು ರಾಜ್ಯಕ್ಕೆ ನೀಡಿದೆ ಎಂದರು.

ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿಯವರು ೧೦೦ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ ೨೭ ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತುಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರು ಮಾತನಾಡಿ, ೨೦೦೮ ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಈ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದರು. ಇದರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅದರಲ್ಲೂ ಬಾಗಲಕೋಟೆ ವಿಜಯಪುರ ಅವಳಿ ಜಿಲ್ಲೆಗಳ ತೋಟಗಾರಿಕೆ ಬೆಳೆಗಳ ವಿಸ್ತರಣೆ, ಸಂಶೋದನೆ, ತರಬೇತಿಗೆ ನೆರವಾಗಿದೆ. ರೈತ ಕುಟುಂಬದಿಂದ ಬಂದ ರೈತರ ಧ್ವನಿಯಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳು ರೈತರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.

ರೈತರ ಹಿತ ಕಾಪಾಡಲು ಕಂಕಣಬದ್ದರಾಗಿದ್ದ ಮುಖ್ಯಮಂತ್ರಿಗಳು ಈ ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು. ರೈತರು ಇದರ ಸದುಪಯೋಗ ಪಡೆದು ಮಾದರಿ ರೈತರಾಗಬೇಕು ಎಂದು ಸಲಹೆ ನೀಡಿದರು. ತೋಟಗಾರಿಕಾ ವಿವಿಯು ರೈತರಿಗೆ ಹಮ್ಮಿಕೊಳ್ಳುತ್ತಿರುವ ತರಬೇತಿ ಕಾರ್ಯಕ್ರಮಗಳ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ತೋಟಗಾರಿಕಾ ಸಚಿವರಾದ ಡಾ.ಕೆ.ಸಿ.ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ.೨.೫ ರಿಂದ ಶೇ. ೫ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಮಾತನಾಡಿ ದೇಶದಲ್ಲಿರುವ ೬ ವಿಶ್ವವಿದ್ಯಾಲಯಗಳ ಪೈಕಿ ಬಾಗಲಕೋಟೆಯೂ ಒಂದಾಗಿದ್ದು, ದೇಶದ ಉತ್ಪಾದನೆಯಲ್ಲಿ ೨ನೇ ಸ್ಥಾನ ಪಡೆದುಕೊಂಡಿದೆ. ಇನ್ನು ಜಾಗತಿಕ ಮಟ್ಟದಲ್ಲಿ ತಲುಪುವತ್ತ ವಿಜ್ಞಾನಿಗಳು ಶ್ರಮಿಸುವ ಅಗತ್ಯವಿದೆ ಎಂದು ತಿಳಿಸಿದರು. ತೋಟಗಾರಿಕೆ ವಿಶ್ವವಿದ್ಯಾಲಯ ಬೇಡಿಕೆಗಳಿಗೆ ಸ್ಪಂಧಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ವಿಶ್ವ ವಿದ್ಯಾಲಯಕ್ಕೆ ಅವಶ್ಯವಿರು ಭೂಮಿಯನ್ನು ಸರಕಾರ ಕೊಡುವ ಕೆಲಸವಾಗಬೇಕು. ಇದರಿಂದ ವಿಸ್ತರಣಾ ಕೇಂದ್ರಗಳಿಗೆ ವಿಸ್ತರಣೆ ಮಾಡಲು ಅನುಕೂಲವಾಗಲಿದೆ. ಶಿಕ್ಷಕರ, ಶಿಕ್ಷಕೇತರ ಕೊರತೆ ಇದ್ದು, ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಬೇಕು. ಬಾಗಲಕೋಟೆ ವಿವಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ತೋವಿವಿಯಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ರಾಜ್ಯ ನಿಂಬೆ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಶೋಕ ಸೋಲಾಪೂರ, ತೋವಿವಿಯ ಕುಲಪತಿ ಡಾ.ಕೆ.ಎಂ.ಇಂದಿರೇಶ, ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್.ಕಟ್ಟಿಮನಿ. ತೋವಿವಿಯ ವಿಸ್ತರಣಾ ನಿರ್ದೇಶಕ ವೈ.ಕೆ.ಕೋಟಿಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";