This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime NewsLocal NewsPolitics NewsState News

ನಿರಾಣಿ ಸಹೋದರರ ವಿರುದ್ಧ ದೂರು

ನಿರಾಣಿ ಸಹೋದರರ ವಿರುದ್ಧ ದೂರು

ಬಾಗಲಕೋಟೆ

ರೈತ ಮುಖಂಡ ಯಲ್ಲಪ್ಪ ಹೆಗಡೆ ಎಂಬುವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಅವರು ನೀಡಿರುವ ದೂರು ಆಧರಿಸಿ ಪೊಲೀಸರು ಕೇಸ್‌ ದಾಖಲಿಸಿದ್ದಾರೆ.

*ಇದನ್ನೂ ಓದಿ*

ರಸ್ತೆ ತಡೆದು ರೈತರ ಪ್ರತಿಭಟನೆ

ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ  ಇಂಗಳಗಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದು, ನಿರಾಣಿ ಸಹೋದರರ ಆರು ಗೂಂಡಾಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಹನುಮಂತ ಶಿಂಧೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Nimma Suddi
";