This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ರಕ್ಕಸಗಿಯಲ್ಲಿ ಪ್ರಾಬಲ್ಯ ಮೆರೆದ ಕಾಂಗ್ರೆಸ್

ನಿಮ್ಮ ಸುದ್ದಿ ಬಾಗಲಕೋಟೆ

ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಪಂನ ನೂತನ ಅಧ್ಯಕ್ಷರಾಗಿ ಅಕ್ಕಮಹಾದೇವಿ ಶರಣಪ್ಪ ಗೌಡಪ್ಪನವರ ಹಾಗೂ ಉಪಾಧ್ಯಕ್ಷೆಯಾಗಿ ಉಮಾ ಸೋಮಶೇಖರ ಬಲಕುಂದಿ ಅವಿರೋಧವಾಗಿ ಆಯ್ಕೆ ಆದರು.

ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ ಉಪಾಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನದ ಮೀಸಲಿನಡಿ ಒಬ್ಬರೇ ಸದಸ್ಯರು ಇದ್ದುದರಿಂದ ಅವರ ಆಯ್ಕೆ ಅವಿರೋಧವಾಗಿ ನಡೆಯುವುದು ಖಚಿತವಾಗಿತ್ತು.

ಆದರೆ ಸಾಮಾನ್ಯ ವರ್ಗಕ್ಕೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತದೆ ಎಂದು ಭಾವಿಸಲಾಗಿದ್ದರೂ ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಎರಡೂ ಸ್ಥಾನಗಳಿಗೂ ಅವಿರೋಧ ಆಯ್ಕೆ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿನ ಸದಸ್ಯರು ಕಾಂಗ್ರೆಸ್ ಬೆಂಬಲಿತರಾಗಿದ್ದರೂ ಜ.೧೯ರಿಂದ ಪ್ರವಾಸಕ್ಕೆ ತೆರಳಿದವರು ನೇರವಾಗಿ ಫೆ.೧ರಂದು ಗ್ರಾಪಂ ಕಚೇರಿಯ ಚುನಾವಣೆ ಪ್ರಕ್ರಿಯೆಗೆ ಆಗಮಿಸಿದ್ದು ವಿಶೇಷವಾಗಿತ್ತು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಕಾರಿ ಮಹಾದೇವ ಬೆಳೆನ್ನವರ ಆಗಮಿಸಿದ್ದರು. ಪಿಡಿಒ ಹಾಗೂ ಸಿಬ್ಬಂದಿ ಇದ್ದರು.

ವಿಜಯೋತ್ಸವ
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರು ಆಯ್ಕೆ ಆಗುತ್ತಿದ್ದಂತೆ ಕಾರ್ಯಕರ್ತರು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಹುನಗುಂದ ವಿಮ ಬ್ಯಾಂಕ್ ನಿರ್ದೇಶಕ ಸೋಮಶೇಖರ ಬಲಕುಂದಿ, ನಿಜಾಮುದ್ದೀನ ಖಾದ್ರಿ, ಶರಣಪ್ಪ ಗೌಡಪ್ಪನವರ, ಸಿದ್ದು ಭದ್ರಶೆಟ್ಟಿ, ಇಕ್ಬಾಲ ಅತ್ತಾರ ಇತರರು ಇದ್ದರು.

";