This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಸ್ಯಾಮ್‌ ಪಿತ್ರೋಡಾ ಹೇಳಿಕೆಗೆ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾತನಾಡಿದ ಅವರು, ನಮ್ಮ ದೇಶದ ರಾಜಕಾರಣದಲ್ಲಿ ತಂದೆ ಹಾಗೂ ಪೂರ್ವಜರ ಹೆಸರಿನಲ್ಲಿ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂಬ ಮಾಧ್ಯಮ ವರದಿ ಓದಿದ್ದ ನೆನಪು ನನಗೆ. ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದಾಚೆಗಿನ ಅಂಶಗಳಿಗೆ ಪಕ್ಷಕ್ಕೆ ಸಂಬಂಧವಿಲ್ಲ. ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ ಎಂದು ತಿಳಿಸಿದರು.

ಪ್ರಧಾನಮಂತ್ರಿಗಳು ದೇಶದೆಲ್ಲೆಡೆ ಪ್ರಚಾರ ಮಾಡುತ್ತಾ ಕರ್ನಾಟಕ ಹಾಗು ಕಾಂಗ್ರೆಸ್ ಪಕ್ಷದ ಬಗ್ಗೆ ದಾಳಿ ಮಾಡುತ್ತಿರುವ ಬಗ್ಗೆ ಕೇಳಿದಾಗ, ಪ್ರಧಾನ ಮಂತ್ರಿಗಳು ಹತಾಶೆ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅವರ ಪಕ್ಷದ ನೆಲೆ ಇಲ್ಲ. ಹೀಗಾಗಿ ಆಂಧ್ರದಲ್ಲಿ ಟಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಅವರ ಸರ್ಕಾರ ಇಲ್ಲ. ಕರ್ನಾಟಕದಲ್ಲೂ ಅವರು ಎರಡಂಕಿ ಸ್ಥಾನ ಪಡೆಯಲ್ಲ. ಹೀಗಾಗಿ ಹತಾಶೆಯಿಂದ ಮಂಗಳ ಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.

ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಸೂಚಿಸಿದರು.

";