ಗುವಾಹಟಿ: ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್‌ಗೆ ಪಕ್ಷವು ವಿವಿಧ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕಗೊಳ್ಳಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದರು.
ಅದೇ ವೇಳೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಇತಿಹಾಸಕ್ಕೆ ಸೇರಲಿದೆ, ಅದು ಕಟ್ಟಿಟ್ಟ ಬುತ್ತಿ ಕಾಂಗ್ರೆಸ್ ವಿವಿಧ ಪ್ರಾದೇಶಿಕ ಪಕ್ಷಗಳಾಗಿ ವಿಭಜನೆಯಾಗಲಿದೆ. ಈ ಚುನಾವಣೆಯ ನಂತರ ಕಾಂಗ್ರೆಸ್‌ನ ರಾಷ್ಟ್ರೀಯ ಸ್ಥಾನಮಾನವು ಕ್ಷೀಣಿಸುತ್ತದೆ. ಏಕೆಂದರೆ ಎನ್‌ಡಿಎ 400 ಪ್ಲಸ್ ಗೆಲುವಿನತ್ತ ಸಾಗುತ್ತಿದೆ. ಬೇರೆ ಯಾವುದೇ ಆಯ್ಕೆ ಇಲ್ಲ ಎಂದು ಶರ್ಮಾ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಾಂಗ್ರೆಸ್ ಕಾರ್ಯಕರ್ತರು ಸಂಪೂರ್ಣವಾಗಿ ಹತಾಶರಾಗಿದ್ದಾರೆ. ಕಾಂಗ್ರೆಸ್ ಯಾವುದೇ ರಾಷ್ಟ್ರೀಯ ನಾಯಕತ್ವವಿಲ್ಲದೆ ಕಾರ್ಯನಿರ್ವಹಿಸುತ್ತಿದೆ. ಕಾಂಗ್ರೆಸ್ ಪ್ರತ್ಯೇಕಗೊಳ್ಳಲಿದೆ, ರಾಷ್ಟ್ರೀಯ ನಾಯಕತ್ವ ಇರುವುದಿಲ್ಲ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಪ್ರಾದೇಶಿಕ ಸಂಘಟನೆಯಾಗಿ ಪ್ರತ್ಯೇಕವಾಗಲಿದೆ ಎಂದು ಅಸ್ಸಾಂ ಸಿಎಂ ಸೂಚಿಸಿದರು.
2015 ರಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದು, ಕಾಂಗ್ರೆಸ್‌ನ ಚುಕ್ಕಾಣಿ ಹಿಡಿದಿರುವ ಗಾಂಧಿ ಕುಟುಂಬದ ಮೇಲೆ ತೀವ್ರ ವಾಗ್ದಾಳಿ ನಡೆಸುತ್ತಿದ್ದು, ಹಿಮಂತ ಬಿಸ್ವಾ ಶರ್ಮಾ ಅವರು ನಿನ್ನೆ ಸಾರ್ವತ್ರಿಕ ಚುನಾವಣೆಗೆ ಅಸೋಮ್ ಗಣ ಪರಿಷತ್ ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ನೊಂದಿಗೆ ತಮ್ಮ ಪಕ್ಷದ ಮೈತ್ರಿಯನ್ನು ಘೋಷಿಸಿದರು.
14 ಲೋಕಸಭಾ ಸ್ಥಾನಗಳ ಪೈಕಿ 11ರಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಎಜಿಪಿ ಮತ್ತು ಯುಪಿಪಿಎಲ್ ಕ್ರಮವಾಗಿ ಎರಡು ಮತ್ತು ಒಂದು ಸ್ಥಾನದಲ್ಲಿ ಸ್ಪರ್ಧಿಸಲಿವೆ.ಏತನ್ಮಧ್ಯೆ, ಅಸ್ಸಾಂ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಣಾ ಗೋಸ್ವಾಮಿ ಗುರುವಾರ ಬಿಜೆಪಿ ಸೇರಿದ್ದಾರೆ. ಅಸ್ಸಾಂ ಕಾಂಗ್ರೆಸ್‌ನ ಮತ್ತೊಬ್ಬ ಕಾರ್ಯಾಧ್ಯಕ್ಷ ಕಾಮಾಖ್ಯ ದೇ ಪುರ್ಕಾಯಸ್ಥ ಕೂಡ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.