ಸಂವಿಧಾನ ಪೀಠಿಕೆ : ಸಾಮೂಹಿಕ ಪ್ರತಿಜ್ಞಾ ವಿಧಿ ಸ್ವೀಕಾರ
ನಿಮ್ಮ ಸುದ್ದಿ ಬಾಗಲಕೋಟೆ
ಭಾರತದ 75ನೇ ಸ್ವಾತಂತ್ರ್ಯದ ವರ್ಷವನ್ನು ಆಜಾದಿ ಕ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.
ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್ ಸಂವಿಧಾನದ ಮಹತ್ವದ ಬಗ್ಗೆ ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಗದವರು ಉಪಸ್ಥಿತರಿದ್ದರು.