ಚಾಮರಾಜನಗರ : ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂವಿಧಾನ ಸುರಕ್ಷಿತವಾಗಿಲ್ಲ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಲೇಬೇಕು. ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಗೆ ಮತ ಹಾಕಬೇಕು. ಮುಸಲೋನಿ, ಹಿಟ್ಲರ್ ಸಿದ್ಧಾಂತದಲ್ಲಿ ನಂಬಿಕೆ ಬಿಜೆಪಿ ಇಟ್ಟಿದ್ದಾರೆ. ಈ ದೇಶದಲ್ಲಿ ಸಂವಿಧಾನ ಜಾರಿಯಾದಾಗ ಅದನ್ನು ವಿರೋಧಿಸಿದ್ದು ಆರ್.ಎಸ್.ಎಸ್. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಅವರು ಶುಕ್ರವಾರ ಕೊಳ್ಳೇಗಾಲ ನಗರದಲ್ಲಿ ಲೋಕಸಭಾ ಚುನಾವಣೆಯ ಅಭಯರ್ತೀ ಸುನೀಲ್ ಬೋಸ್ ಅವರ ಪರ ಪ್ರಜಾಧ್ವನಿ -02 ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಬಡವರು, ರೈತರು, ದಲಿತರು, ಹಿಂದುಳಿದವg, ಅಲ್ಪಸಂಖ್ಯಾತರ ಪರವಾಗಿ ಏನು ಮಾಡಿದ್ದೇವೆ ಎಂದು ಹೇಳಿಕೊಳ್ಳಲು ಅವರು ಯಾವ ಸಾಧನೆಯನ್ನೂ ಮಾಡಿಲ್ಲ. ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಒಂದು ವರ್ಷ ಮುಖ್ಯಮಂತ್ರಿಯಾಗಿದ್ದರು. ನಂತರ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. 5 ವರ್ಷಗಳ ಅವಧಿಯಲ್ಲಿ ಏನೂ ಕೆಲಸ ಮಾಡಿಲ್ಲ. ಅವರು ಕೇಳುತ್ತಿರುವುದು ಮೋದಿಗೆ ಮತ ಹಾಕಿ ಎಂದು ಕೆಲಸದ ಆಧಾರದ ಮೇಲೆ ಅಲ್ಲ. ಇವರ್ಯಾರಿಗೂ ಮತ ಕೇಳಲು ಮುಖವೂ ಇಲ್ಲ, ನೈತಿಕತೆಯೂ ಇಲ್ಲ ಎಂದರು.
ಇವರಿಗೆ ಮೋದಿ ಬಿಟ್ಟರೆ ಬೇರೆ ಚುನಾವಣಾ ವಸ್ತುವೇ ಇಲ್ಲ. ಎನ್‍ಡಿಎ ನೇತೃತ್ವದಲ್ಲಿ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿರುವ ಮೋದಿ 10 ವರ್ಷಗಳಲ್ಲಿ ಏನು ಹೇಳಿದ್ದರು? ಏನು ಮಡಿದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದು ಕರೆ ನೀಡಿದರು.
ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬನ ಮನೆಗೆ 15 ಲಕ್ಷ ಖಾತೆಗೆ ಹಾಕುವುದಾಗಿ ಹೇಳಿದ್ದರು. ಹಾಕಿದರೆ? ರೈತರ ಆದಾಯ 5 ವರ್ಷಗಳಲ್ಲಿ ದುಪ್ಪಟ್ಟು ಮಾಡುತ್ತೇನೆ ಎಂದಿದ್ದರು, ಮಾಡಿದರೆ? ರೈತರು ನೆಮ್ಮದಿಯಾಗಿದ್ದಾರೆಯೇ? ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದ್ದರು, ಮಾಡಿದರೆ? ಈವರೆಗೆ 20 ಕೋಟಿ ಉದ್ಯೋಗಗಳನ್ನು ಸೃಷ್ಟಿಸಬೇಕಿತ್ತು ಆದರೆ ಈವರೆಗೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸಲಾಗಿಲ್ಲ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ 43 % ಮತಗಳನ್ನು ಪಡೆದು 136 ಸ್ಥಾನಗಳನ್ನು ಪಡೆದಿದ್ದೇವೆ. ಅಧಿಕಾರದಲ್ಲಿದ್ದ ವಿರೋಧ ಪಕ್ಷ ಕೇವಲ 66 ಸ್ಥಾನಗಳನ್ನು ಪಡೆಯಿತು. ಜಾತ್ಯಾತೀತ ಎಂದು ಹೇಳಿಕೊಳ್ಳುವ ಪಕ್ಷ 19 ಸ್ಥಾನಗಳನ್ನು ಪಡೆಯಿತು. ಈಗ ಅವರಿಬ್ಬರಿಗೂ ಈ ಚುನಾವಣೆಯಲ್ಲಿ ಭಯ ಬಂದಿದೆ. ಒಟ್ಟುಗೂಡಿ ಕಾಂಗ್ರಸ್ ಪಕ್ಷವನ್ನು ಎದುರಿಸುವ ಪ್ರಯತ್ನ ಮಾಡುತ್ತಿದ್ದಾರೆ ಯಾವುದೇ ಸಿದ್ಧಾಂತ, ಕಾರ್ಯಕ್ರಮ ಇಲ್ಲದೇ, ಕಾಂಗ್ರೆಸ್ ಸೋಲಿಸಬೇಕು ಎನ್ನುವುದೊಂದೇ ಗುರಿ ಎಂದು ಸೂಚಿಸಿದರು.