This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics News

ಸೂಳೇಬಾವಿಯಲ್ಲಿ ಸಹಕಾರ ಸಪ್ತಾಹ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಬಾವಿಯಲ್ಲಿ ೬೭ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಯುವಜನ ಮಹಿಳಾ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಘಗಳು ಆಚರಣೆ ನಡೆಯಲಿದೆ.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯುನಿಯನ್, ಬಿಡಿಸಿಸಿ ಬ್ಯಾಂಕ್, ಸ್ಥಳೀಯ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನ.೧೯ರಂದು ಬೆಳಗ್ಗೆ ೧೧ಕ್ಕೆ ಗ್ರಾಮದ ಶಾಖಾಂಬರಿ ಕಲ್ಯಾಣ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ಅದ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟನೆ, ಎಸ್.ಜಿ.ನಂಜಯ್ಯನಮಠ ಧ್ವಜಾರೋಹಣ, ಸಹಕಾರ ಪಿತಾಮಹ ಸಿದ್ದನಗೌಡ ಪಾಟೀಲರ ಭಾವಚಿತ್ರಕ್ಕೆ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕಾಶಿನಾಥ ಹುಡೇದ ಪುಷ್ಪಾರ್ಪಣೆ ಮಾಡಲಿದ್ದಾರೆ.

ರಾಜ್ಯ ಪತ್ತಿನ ಸಹಕಾರ ಸಂಘಗಳ ನಿರ್ದೇಶಕ ಆರ್.ಪಿ.ಕಲಬುರ್ಗಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ, ಮುರುಗೇಶ ಕಡ್ಲಿಮಟ್ಟಿ, ಹುನಗುಂದ ಟಿಎಪಿಸಿಎಂಎಸ್ ಅಧ್ಯಕ್ಷ ಮಹಾಲಿಂಗಯ್ಯ ಹಿರೇಮಠ, ತಾಪಂ ಸದಸ್ಯೆ ಯಶೋಧ ಭದ್ರಣ್ಣವರ, ಜಿಲ್ಲಾ ಸಹಕಾರ ಯುನಿಯನ್ ನಿರ್ದೇಶಕ ಸಂಗಣ್ಣ ಹಂಡಿ, ಮಲ್ಲಣ್ಣ ಕುರಿ, ನಿಂಗಣ್ಣ ಗೋಡಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮಲ್ಲಣ್ಣ ನಿಡಸನೂರ, ಜಿಪಂ ಸದಸ್ಯ ಶಶಿಕಾಂತ ಪಾಟೀಲ, ಲಕ್ಷö್ಮಣ ಗುರಂ ಇತರರು ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

Nimma Suddi
";