This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Crime News

ಬಾಗಲಕೋಟೆಯಲ್ಲಿ ಕೊರೋನಾ ಸ್ಪೋಟ

*68 ಜನ ಗುಣಮುಖ, 390 ಹೊಸ ಪ್ರಕರಣ ದೃಡ*

ನಿಮ್ಮ ಸುದ್ದಿ ಬಾಗಲಕೋಟೆ

ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್‍ನಿಂದ 68 ಜನ ಗುಣಮುಖರಾಗಿದ್ದು, ಹೊಸದಾಗಿ 390 ಕೊರೊನಾ ಪ್ರಕರಣಗಳು ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 15,715 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 14,534 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ಬಾಗಲಕೋಟೆ 191, ಬಾದಾಮಿ 50, ಜಮಖಂಡಿ 43, ಬೀಳಗಿ 10, ಮುಧೋಳ 43, ಹುನಗುಂದ 45 ಹಾಗೂ ಬೇರೆ ಜಿಲ್ಲೆಯ 8 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 4599 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 535129 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 514215 ನೆಗಟಿವ್ ಪ್ರಕರಣ, ಹಾಗೂ 141 ಮೃತ ಪ್ರಕರಣ ವರದಿಯಾಗಿರುತ್ತದೆ.

ಇನ್ನು 1040 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.