This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಬಾಗಲಕೋಟೆಯಲ್ಲಿ ಕೊರೊನಾ ಸ್ಪೋಟ

13 ಜನ ಗುಣಮುಖ, 71 ಹೊಸ ಪ್ರಕರಣ ದೃಡ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ 13 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 71 ಕೊರೊನಾ ಪ್ರಕರಣಗಳು ಶುಕ್ರವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 14469 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 14043 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ದೃಡಪಟ್ಟವರಲ್ಲಿ ಹುನಗುಂದ 1೨, ಜಮಖಂಡಿ 5, ಮುಧೋಳ 21, ಬಾಗಲಕೋಟೆ 22, ಬಾದಾಮಿ 5, ಬೀಳಗಿ 3 ಹಾಗೂ ಬೇರೆ ಜಿಲ್ಲೆಯ ಮೂವರಲ್ಲಿ ಸೋಂಕು ದೃಡಪಟ್ಟಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1116 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 502033 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 485913 ನೆಗಟಿವ್ ಪ್ರಕರಣ 138 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 288 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Nimma Suddi
";