239 ಜನ ಗುಣಮುಖ,
691 ಹೊಸ ಪ್ರಕರಣ ದೃಡ
ನಿಮ್ಮ ಸುದ್ದಿ ಬಾಗಲಕೋಟೆ
:ಜಿಲ್ಲೆಯಲ್ಲಿ ಕೋವಿಡ್‍ನಿಂದ 239 ಜನ ಗುಣಮುಖರಾಗಿದ್ದು, ಹೊಸದಾಗಿ 691 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣ ರವಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 18295 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 15661 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.
ಹೊಸದಾಗಿ ಬಾಗಲಕೋಟೆ 287, ಬಾದಾಮಿ 91, ಜಮಖಂಡಿ 62, ಹುನಗುಂದ 105, ಮುಧೋಳ 112, ಬೀಳಗಿ 34 ಜನರಲ್ಲಿ ಸೋಂಕು ದೃಡಪಟ್ಟಿವೆ.
ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 6950 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 558792 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 532947 ನೆಗಟಿವ್ ಪ್ರಕರಣ, ಹಾಗೂ 153 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 2481 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
*ಕೋವಿಡ್‍ಗೆ ಓರ್ವ ಸಾವು*
ಜಿಲ್ಲೆಯಲ್ಲಿ ಕೋವಿಡ್‍ಗೆ ರವಿವಾರ ಓರ್ವ ಸಾವನ್ನಪ್ಪಿದ್ದಾರೆ. ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ 46 ವರ್ಷದ ಪುರುಷ ಪಿ- 1565685 ತೀರ್ವ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾರೆ. ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.