*ಇಬ್ಬರು ಗುಣಮುಖ, 15 ಹೊಸ ಪ್ರಕರಣ ದೃಡ*
ನಿಮ್ಮ ಸುದ್ದಿ ಬಾಗಲಕೋಟೆ
ಇಬ್ಬರು ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 15 ಕೊರೊನಾ ಪ್ರಕರಣಗಳು ಶನಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13826 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13660 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 6, ಬಾದಾಮಿ ಮತ್ತು ಮುಧೋಳ ತಲಾ 2, ಬೀಳಗಿ 4 ಹಾಗೂ ಜಮಖಂಡಿಯಲ್ಲಿ 1 ಪ್ರಕರಣ ದೃಡಪಟ್ಟಿದ್ದು, ಸರಕಾರಿ, ಖಾಸಗಿ ಹಾಗೂ ಹೋಮ್ ಐಸೋಲೇಷನ್ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರಿಕ್ಷಿಸಲಾಗುತ್ತಿದ್ದ 2684 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 410884 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 393806 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 30 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ