ಬಾಗಲಕೋಟೆ
ರಾಜ್ಯದ ನಾನಾ ಭಾಗಗಳಲ್ಲಿನ ಯುವ ಕವಿ ಹಾಗೂ ಕವಿಯಿತ್ರಿಗಳಿಗೆ ರಾಜ್ಯದ 30 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಕವಿಗೋಷ್ಠಿ ಹಮ್ಮಿಕೊಳ್ಳುವ ಮೂಲಕ ಪ್ರತಿಭೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಬರಹಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಪ್ರಿಯಾ ಬಸರಕೋಡ ತಿಳಿಸಿದರು.
ರಾಜ್ಯ ಬರಹಗಾರರ ಸಂಘದ ಜಿಲ್ಲಾ ಘಟಕದಿಂದ ನಗರದ ಕಸಾಪ ಭವನದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕವಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕನ್ನಡದ ಉಳಿವಿಗೆ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಕರ್ನಾಟಕ ಸಾಹಿತ್ಯ ಪರಿ?Àತ್‌ನ ಮಹಿಳಾ ಘಟಕದ ಸಂಚಾಲಕಿ ಜಯಶ್ರೀ ಮುರನಾಳ, ಕನ್ನಡ ನಾಡಿನ ಇತಿಹಾಸ, ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು. ಉತ್ತರ ಕರ್ನಾಟಕದ ಕವಿಗಳಿಗೆ, ಕಲಾವಿದರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ವಾಕರಸಾ ಸಂಸ್ಥೆಯ ನೌಕರರ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ವೀರೇಶ ಪಟ್ಟಣಶೆಟ್ಟಿ, ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಕವಿಗೋಷ್ಠಿ ಉದ್ಘಾಟಿಸಿದರು.
ಜಿಲ್ಲೆಯ ನಾನಾ ಭಾಗಗಳಿಗೆ ಆಗಮಿಸಿದ 30ಕ್ಕೂ ಹೆಚ್ಚು ಕವಿಗಳು ಕನ್ನಡ ನಾಡಿನ ಕುರಿತು ತಮ್ಮ ಕವನಗಳನ್ನು ವಾಚಿಸಿದರು. ಕವಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.