This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭ್ರಷ್ಟಾಚಾರ: ಆರ್ ಅಶೋಕ ಕಿಡಿ

ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಭ್ರಷ್ಟಾಚಾರ: ಆರ್ ಅಶೋಕ ಕಿಡಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ರಾಜ್ಯ ಕಾಂಗ್ರೆಸ್ ಸರ್ಕಾರದ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬಿಬಿಎಂಪಿಯನ್ನ ಬ್ರಹ್ಮಾಂಡ ಬ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ಟೀಕಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಬೇಕು ಎಂದರು.

ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ಕಳಿಸಿ ದಂಡ ಸಮೇತ ತೆರಿಗೆ ವಸೂಲಿ ಮಾಡಬೇಕಿದ್ದು, ಬಿಬಿಎಂಪಿ ತೆರಿಗೆ ಸಗ್ರಹದಲ್ಲಿ ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿ ಗೊತ್ತಾಗಿದ್ದು, ವಲಯಾಧಿಕಾರಿಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್​​​ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ಗೆ ಶಿಫಾರಸು ಮಾಡಿದ್ದಾರೆ. ಇದರ ಬೆನ್ನಲ್ಲೇ ವಾಗ್ದಾಳಿ ನಡೆಸಿದ್ದಾರೆ.

";