This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಫೇಕ್ ಸುದ್ದಿ ಸೃಷ್ಟಿಸುವುದು ಸಿಎಂ ಸಿದ್ದುಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ: ಬಿಜೆಪಿ ಟಾಂಗ್

ಫೇಕ್ ಸುದ್ದಿ ಸೃಷ್ಟಿಸುವುದು ಸಿಎಂ ಸಿದ್ದುಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ: ಬಿಜೆಪಿ ಟಾಂಗ್

ಬೆಂಗಳೂರು:  ಜ. 17 ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿ ಸೃಷ್ಟಿಸುವುದು, ಇದೆಲ್ಲವೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಬಿಜೆಪಿ (BJP) ವ್ಯಂಗ್ಯವಾಡಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ರಾಜ್ಯ ಬಿಜೆಪಿ, ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಿಎಂ ಯೋಚಿಸಿದ್ದರೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ ನಡೆಯುತ್ತಿರಲಿಲ್ಲ ಎಂದು ಉಲ್ಲೇಖಿಸಿದೆ.

ಅದರ ಜೊತೆಗೆ ಎಡಿಟಿಂಗ್ ಮಾಸ್ಟರ್ ಎಂದು ಸಿದ್ದರಾಮಯ್ಯ ಅವರನ್ನು ಕುಹಕವಾಡಿದ್ದು, ಎಲ್ಲೆಂದರಲ್ಲಿ ನಿದ್ದೆಗೆ ಜಾರುವುದು ನೀವೇ (ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ) ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಯವರನ್ನು ಅವಹೇಳನ ಮಾಡಿದರೆ ಜನರು ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆ ಬಗೆಹರಿಸಿ‌ ಎಂದು ಬಿಜೆಪಿ ಸೂಚಿಸಿದೆ.

";