ಮೇ 18 ರಂದು ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಪ್ಲೇಆಫ್ ರೇಸ್ನಲ್ಲಿ ಉಳಿಯಲಿದೆ.
ಒಂದು ವೇಳೆ ಈ ಮ್ಯಾಚ್ನಲ್ಲಿ ಸಿಎಸ್ಕೆ ತಂಡ ಸೋತರೂ ಪ್ಲೇಆಫ್ಗೆ ಅರ್ಹತೆ ಪಡೆಯಬಹುದು. ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.528 ಇದೆ. ಮುಂದಿನ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ರೋಚಕ ಸೋಲನುಭವಿಸಿದರೆ ಸಿಎಸ್ಕೆ ತಂಡದ ನೆಟ್ ರನ್ ರೇಟ್ನಲ್ಲಿ ಅಂತಹ ಮಹತ್ವದ ಬದಲಾವಣೆ ಕಂಡು ಬರುವುದಿಲ್ಲ.
ಅದೇ ಆರ್ಸಿಬಿ ತಂಡವು ಕನಿಷ್ಠ 18 ರನ್ ಅಥವಾ ಇದಕ್ಕಿಂತ ಹೆಚ್ಚಿನ ರನ್ಗಳ ಅಂತರದಿಂದ ಗೆದ್ದರೆ / ಇಲ್ಲ 11 ಬಾಲ್ಗಳನ್ನು ಉಳಿಸಿ ಚೇಸ್ ಮಾಡಿದರೆ ಮಾತ್ರ ಸಿಎಸ್ಕೆ ತಂಡದ ನೆಟ್ ರನ್ ರೇಟ್ ಅನ್ನು ಹಿಂದಿಕ್ಕಬಹುದಿದ್ದು, ಇಲ್ಲದಿದ್ದರೆ ಸೋತರೂ ಸಿಎಸ್ಕೆ ಪಾಯಿಂಟ್ಸ್ ಟೇಬಲ್ನಲ್ಲಿ 4ನೇ ಸ್ಥಾನದಲ್ಲೇ ಉಳಿಯಲಿದೆ.
ಏಕೆಂದರೆ ಎಲ್ಎಸ್ಜಿ ತಂಡದ ಪ್ರಸ್ತುತ ನೆಟ್ ರನ್ ರೇಟ್ ಮೈನಸ್ನಲ್ಲಿದ್ದು, ಎಲ್ಎಸ್ಜಿ 2 ಪಂದ್ಯಗಳಲ್ಲಿ ಒಂದರಲ್ಲಿ ಸೋತರೂ ಅದು ಸಿಎಸ್ಕೆ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಇದರಿಂದ ಆರ್ಸಿಬಿ ವಿರುದ್ಧ ಸೋತರೂ ಸಿಎಸ್ಕೆ ತಂಡವು ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲೇ ಉಳಿಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್ ರನ್ ರೇಟ್ ಕೂಡ -0.482 ರಲ್ಲಿದೆ. ಒಟ್ಟು 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂದಿನ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.
ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 2 ಮ್ಯಾಚ್ಗಳಲ್ಲಿ ಒಂದರಲ್ಲಿ ಸೋಲನುಭವಿಸಿದರೂ ಸಾಕು. ಚೆನ್ನೈ ಸೂಪರ್ ಕಿಂಗ್ಸ್ 4ನೇ ಸ್ಥಾನದಲ್ಲೇ ಕಾಣಿಸಿಕೊಳ್ಳಲಿದೆ.