ನಿಮ್ಮ ಸುದ್ದಿ ವಿಜಯಪುರ
ರಾಜ್ಯದಲ್ಲಿ ಮುಂದೊಂದು ದಲಿತರು ಸಿಎಂ ಆಗಲಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ವಿಜಯಪುರದಲ್ಲಿ ದ್ರಾಕ್ಷಿ ಮಾರಾಟ ಹಾಗೂ ಪ್ರದರ್ಶನ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ದಲಿತರು ಸಿಎಂ ಆಗುವ ಕಾಲ ಕೂಡಿಬಂದಿದೆ ಎಂದರು.
ರಾಜ್ಯದಲ್ಲಿ ಚುನಾವಣೆ ಸಮಯದಲ್ಲಿ ಬಜೆಟ್ ಮಂಡನೆಯಾಗುತ್ತಿದೆ. ಸಿಎಂ ಬೊಮ್ಮಾಯಿ ಬಡವರು ಸೇರಿದಂತೆ ಎಲ್ಲ ವರ್ಗದವರಿಗೂ ಉತ್ತಮ ಬಜೆಟ್ ನೀಡಲಿದ್ದಾರೆ ಎಂದು ತಿಳಿಸಿದರು.