This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Local NewsState News

ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ : ಡಿಸಿ ಜಾನಕಿ

ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ : ಡಿಸಿ ಜಾನಕಿ

ಬಾಗಲಕೋಟೆ

ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಈ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಕಟ್ಟಡದ ಮೇಲೆ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ಹಾಗೂ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪಥಸಂಚಲನ ಕಾರ್ಯಕ್ರಮದಲ್ಲಿ ಪೋಲಿಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್.ಸಿ.ಸಿ. ಕೆಡೆಟ್‍ಗಳನ್ನು ಆಹ್ವಾನಿಸಲು ಸೂಚಿಸಲಾಯಿತು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು.

ಕಾರ್ಯಕ್ರಮಗಳ ಸಿದ್ದತೆಗೆ ಸಮಿತಿಗಳನ್ನು ರಚಿಸಲಾಗಿದ್ದು, ಪೂರ್ವ ತಯಾರಿಗಾಗಿ ಉಪ ಸಮಿತಿಗಳ ಸಭೆ ಕರೆದು ಬೇಕಾಗುವ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.

ಸಂಪೂರ್ಣವಾಗಿ ಪ್ಲಾಸ್ಟಿಕ್ ದ್ವಜ ಬಳಸುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಧ್ವಜಗಳನ್ನು ತರುವುದನ್ನು ನಿರ್ಭಂದಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು.

ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಗಣ್ಯರಿಗೆ ಶಾಸಕರಿಗೆ, ಸಂಸದರುಗಳಿಗೆ ಹಾಗೂ ಪತ್ರಕರ್ತರಿಗೆ ಸೂಕ್ತ ಆಸನಗಳ ವ್ಯವಸ್ಥೆ, ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆಯನ್ನು ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನ ಹಾಗೂ ತಾಲೂಕ ಭವನಕ್ಕೆ ವಿದ್ಯುತ್ ಅಲಂಕಾರ ಮಾಡುವಂತೆ ತಿಳಿಸಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ರಾಷ್ಟ್ರಕವಿ ಕುವೆಂಪುರವರ ವಿರಚಿತ ನೇಗಿಲಯೋಗಿ ಹಾಡನ್ನು ರಾಷ್ಟ್ರಗೀತೆ ನಂತರ ಪರಿಣಿತ ಕಲಾವಿದರಿಂದ ಹಾಡಿಸಲು ತಿಳಿಸಲಾಯಿತು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಮಾಡುವುದು, ಗಣರಾಜ್ಯೋತ್ಸವ ದಿನದಂದು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ರಿಯರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ರಿಯಾಯಿತಿ ದರದಲ್ಲಿ ವಾಹನ ವ್ಯವಸ್ಥೆಯನ್ನು ಮಾಡುವಂತೆ ವಾಯವ್ಯ ರಾಜ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಿಳಿಸಿದರು.
ಸದರಿ ದಿನದಂದು ಪೋಲಿಸ್ ಬಂದೂಬಸ್ತಿ ವ್ಯವಸ್ಥೆ ಮಾಡುವಂತೆ ಪೋಲಿಸ್ ಇಲಾಖೆಗೆ ಸೂಚಿಸಲಾಯಿತು.

ರಾಷ್ಟ್ರೀಯ ಕಾರ್ಯಕ್ರಮವಾಗಿರುವದರಿಂದ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಸಭೆಯಲ್ಲಿ ಯುಕೆಪಿ ಡಿಜಿಎಂ ಎಸ್.ಪಿ.ಘಂಟಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";