ಬಾಗಲಕೋಟೆ
ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದ ಶಿಷ್ಟಾಚಾರದಂತೆ ಕರ್ತವ್ಯ ನಿರ್ವಹಿಸಲು ಸಜ್ಜುಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ. ಎಮ್ ಸೂಚಿಸಿದರು.
ಜಿಲ್ಲಾಡಳಿತ ಭವನ ಆಡಿಟೋರಿಯಮ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಲಸಾಗಿದ್ದ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿ ಚುನಾವಣೆ ಕೂಡ ಅತ್ಯಂತ್ಯ ಜವಾಬ್ದಾರಿಯುತವಾಗಿರುವಂತಾಗಿರುತ್ತದೆ. ಲೋಕಸಭಾ ಚುನಾವಣೆ ಸುಲಭವಾಗಿ ಕರ್ತವ್ಯ ನಿರ್ವಹಿಸಬಹುದು ಎಂದು ನಿರ್ಲಹಿಸುವಂತಿಲ್ಲ. ಶಿಷ್ಟಾಚಾರದಂತೆಯೇ ಕರ್ತವ್ಯ ನಿರ್ವಹಿಸಬೇಕು. ಸಾರ್ವತ್ರಿಕ ಚುನಾವಣಾ ವೇಳೆಯಲ್ಲಿ ಜಿಲ್ಲಾಧಿಕಾರಿಗಿರುವ ಜವಾಬ್ದಾರಿ ಇತರ ಅಧಿಕಾರಿ ಮತ್ತು ಸಿಬ್ಬಂದಿಗೂ ಇರುತ್ತದೆ.
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡAತಹವರು ಹೊಸಬರಾಗಿದ್ದಲ್ಲಿ ಎಚ್ಚರಿಕೆಯಿಂದ, ಅನುಮಾನವಿದ್ದಲ್ಲಿ ಕೇಳಿ ತಿಳಿದುಕೊಂಡು, ಹಳಬರಾಗಿದ್ದಲ್ಲಿ ಮರು ಮೌಲ್ಯಮಾಪನ ಮಾಡಿಕೊಂಡು ಪಕ್ಷಾತೀತವಾಗಿ ಕಾರ್ಯನಿರ್ವಹಿಸದಲ್ಲಿ ಚುನಾವಣೆಯನ್ನು ಸರಳ ಸುಸುತ್ರವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ ತರಬೇತಿಯಿಂದ ಅವಧಿಯಿಂದ ಚುನಾವಣೆ ಮುಗಿಯವರೆಗೂ ಎಲ್ಲ ನೌಕರರಿಗೂ ಹೊಣೆಗಾರಿಕೆಯ ಜವಾಬ್ದಾರಿ ಇದ್ದು, ಸಮರ್ಥವಾಗಿ ಕರ್ತವ್ಯ ನಿರ್ವಹಿಸಲು ತರಬೇತಿ ಅಗತ್ಯವಾಗಿರುತ್ತದೆ. ಚುನಾವಣೆಯುಲ್ಲಿ ಎಲ್ಲೂ ಲೋಪದೋಷಗಳಾಗದಂತೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನುಸಾರವೇ ಚುನಾವಣೆ ನಡೆಯಬೇಕಾಗಿರುತ್ತದೆ.
ಚುನಾವಣೆ ಸಮಯದಲ್ಲಿ ಎಸ್ ಒ ಪಿ ಪಾಲಿಸಬೇಕು. ರಾಜಕೀಯ ಪಕ್ಷಗಳು ಧಾರ್ಮಿಕ ಸ್ಥಳಗಳನ್ನು ಬಳಸಿಕೊಳ್ಳುವುದು, ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುವುದು ಸಂಪೂರ್ಣವಾಗಿ ನಿಷೇದsÀವಿರುತ್ತದೆ. ಇಂತಹ ಇನ್ನೂ ಅನೇಕ ವಿಷಯಗಳನ್ನು ಇಂದಿನ ತರಬೇತಿಯಲ್ಲಿ ಪಡೆದು ಚುನಾವಣಾ ಕರ್ತವ್ಯವನ್ನು ಜಾಗರೂಕತೆಯಿಂದ ಸಮರ್ಥವಾಗಿ ನಿರ್ವಹಿಸಿ ಎಂದು ಹೇಳಿದರು.
ತರಬೇತಿ ನೀಡಲು ಬೆಳಗಾವಿ ಜಿಲ್ಲೆ ಚಿಕ್ಕೊಡಿಯ ಶಿರಗಾಂಕರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ,ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಹಾಗೂ ಇತರರು ಇದ್ದರು.