This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsState News

ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸಿದ ಡಿಸಿ ಜಾನಕಿ

ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸಿದ ಡಿಸಿ ಜಾನಕಿ

ರಾಂಪೂರದಲ್ಲಿ ಜನತಾ ದರ್ಶನ | ವಿವಿಧ ಸೌಲಭ್ಯಗಳ ವಿತರಣೆ

ಬಾಗಲಕೋಟೆ

ಸಮಸ್ಯೆಗಳನ್ನು ಹೊತ್ತು ತಂದ ಗ್ರಾಮಸ್ಥರ ಅಹವಾಲುಗಳಿಗೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಸ್ಪಂಧಿಸುವ ಮೂಲಕ ಪರಿಹಾರೋಪಾಯಗಳನ್ನು ಒದಗಿಸುವ ಕಾರ್ಯ ಮಾಡಿದರು.

ತಾಲೂಕಿನ ರಾಂಪೂರ ಗ್ರಾಮದ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡ ತಾಲೂಕಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂತ್ರಸ್ಥರಿಗೆ ನೀಡಬೇಕಾದ ಪರಿಹಾರಧನ, ಹೊಲದಲ್ಲಿ ದಾರಿ ಸಮಸ್ಯೆ, ಗ್ರಾಮಗಳಲ್ಲಿ ಹಳೆಯ ವಿದ್ಯುತ್ ಕಂಬಗಳ ಬದಲಾವಣೆ, ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನೇಮಕ, ಗ್ರಾಮ ಒನ್ ಕೇಂದ್ರ ಸ್ಥಾಪನೆ, ಒತ್ತುವರಿ ತೆರವು, ಪುನರ್ವಸತಿ ಪುನರ್ ನಿರ್ಮಾಣ, ಮರಣ ಪರಿಹಾರ ಸೇರಿದಂತೆ ಇತರೆ ಸಮಸ್ಯೆಗಳನ್ನು ಹೊತ್ತು ತಂದಿದ್ದರು.

ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಲ್ಲಿ ತೋಡಿಕೊಂಡರು. ಜನರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಕೆಲವೊಂದು ಸಣ್ಣಪುಟ್ಟ ಕೆಲಸಗಳಿಗೆ ಸ್ಥಳದಲ್ಲಿಯೇ ಇತ್ಯರ್ಥಪಡಿಸುವ ಕಾರ್ಯ ಮಾಡಿದರು. ಕೆಲವೊಂದು ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸುವುದಾಗಿ ಹೇಳಿದರು. ಜನತಾ ದರ್ಶನದಲ್ಲಿ ಒಟ್ಟಾರೆಯಾಗಿ ನೂರಕ್ಕೂ ಹೆಚ್ಚು ಸಾರ್ವಜನಿಕರಿಂದ ಅಹವಾಲುಗಳು ಸ್ವೀಕೃತಗೊಂಡಿದ್ದು, ಅದರಲ್ಲಿ ೨೦ ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚನಿಗೆ ಸಂಬAದಪಟ್ಟಿದ್ದವರು. ಅವುಗಳಿಗೆ ಸ್ಥಳದಲ್ಲಿಯೇ ಮಂಜೂರಾತಿ ಆದೇಶ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಸರಕಾರ ಪ್ರತಿ ೧೫ ದಿನಗಳಿಗೊಮ್ಮೆ ಒಂದೊAದು ತಾಲೂಕಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದೆ. ಈ ಕಾರ್ಯಕ್ರಮದ ಉದ್ದೇಶ ಅಧಿಕಾರಿಗಳು ಕಚೇರಿಯಲ್ಲಿ ಕೂಡದೇ ಜನರ ಬಳಿ ಹೋಗಿ ಅವರ ಸಮಸ್ಯೆಗಳನ್ನು ಅರಿಯಬೇಕು ಎಂದರು.

ಅಧಿಕಾರಿ ಮತ್ತು ಜನರ ನಡುವೆ ಇರುವ ಸೇತುವೆಯಾಗಿ ಕೆಲಸ ಮಾಡುತ್ತದೆ. ಸಣ್ಣ ಪುಟ್ಟ ಕೆಲಸಗಳಿಗೆ ಕಚೇರಿಗೆ ಅಲಿಯುವದನ್ನು ತಪ್ಪಿಸಿ ಗ್ರಾಮಸ್ಥರ ಬಳಿ ತೆರಳಿ ಸಮಸ್ಯೆ ಇತ್ಯರ್ಥಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು, ತಹಶೀಲ್ದಾರರು ವಾರದಲ್ಲಿ ಒಂದು ದಿನ ಜನತಾ ದರ್ಶನಕ್ಕೆ ಮೀಸಲಿರಿಸುವಂತೆ ನಿರ್ದೇಶನ ನೀಡಲಾಗಿತ್ತು. ಅಲ್ಲಿಯೂ ಕೂಡಾ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ವಾಯ್.ಮೇಟಿ ಮಾತನಾಡಿ ಸಾರ್ವಜನಿಕರು ಪದೇ ಪದೇ ಸಣ್ಣಪುಟ್ಟ ಕೆಲಸಗಳಿಗೆ ಸರ್ಕಾರಿ ಕಚೇರಿ, ಶಾಸಕರ ಬಳಿಗೆ ಅಲೆಯುವದನ್ನು ತಪ್ಪಿಸುವ ಉದ್ದೇಶದಿಂದ ಜನತಾ ದರ್ಶನ ಕಾರ್ಯಕ್ರಮ ಮೂಲಕ ಮನೆ ಮನಗಳ ತಲುಪಿಸುವ ಕಾರ್ಯ ಸರಕಾರ ಮಾಡುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ನಾರಾಯಣ ಶಿಲ್ಪಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾ ವ್ಯವಸ್ಥಾಪಕ ರಮೇಶ ಕಳಸದ, ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಜಂಟಿ ಕೃಷಿ ನಿರ್ದೇಶಕ ಲಕ್ಷö್ಮಣ ಕೋಳೆನ್ನವರ, ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಅಫಘಾತ ಮರಣ ಪರಿಹಾರಧನ, ಇತರೆ ಸೌಲಭ್ಯ ವಿತರಣೆ

ವಾಹನ ಚಾಲಕರಾದ ವಿಠಲ ಕೆಂಜೋಡಿ ಅವರು ಅಪಘಾತದಲ್ಲಿ ಮರಣ ಹೊಂದಿದ ನಿಮಿತ್ಯ ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯಡಿ ೫ ಲಕ್ಷ ರೂ.ಗಳ ಪರಿಹಾರಧನವನ್ನು ಮೃತರ ಅವಲಂಬಿತರ ಖಾತೆಗೆ ಜಮೆ ಮಾಡಲಾದ ಆದೇಶದ ಪತ್ರವನ್ನು ಶಾಸಕ ಎಚ್.ವಾಯ್.ಮೇಟಿ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ವಿತರಿಸಿದರು. ಕಾರ್ಮಿಕ ಇಲಾಖೆಯಿಂದ ೬ ರಿಂದ ೮ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಸಾಮಗ್ರಿಗಳ ಕಿಟ್‌ಗಳನ್ನು ವಿತರಿಸಲಾಯಿತು.

";