ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಕೋವಿಡ್ ಲಸಿಕೆಯನ್ನು ರವಿವಾರ ಪಡೆದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಂದಾಯ, ಪೊಲೀಸ್ ಹಾಗೂ ಪಂಚಾಯತ ರಾಜ್ ಇಲಾಖೆಯ ಫಲಾನುಭವಿಗಳು ಕೋವಿಡ್ ಲಸಿಕೆ ಪಡೆದಿದ್ದು, ಲಸಿಕೆ ಪಡೆಯದೇ ಉಳಿದವರಿಗೆ ಫೆಬ್ರವರಿ 22, 23 ಹಾಗೂ 24 ರಂದು ಲಸಿಕೆ ನೀಡಲಾಗುತ್ತಿದೆ.
ನೋಂದಾಯಿಸಿದ ಫಲಾನುಭವಿಗಳು ತಪ್ಪದೇ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಏಕೆಂದರೆ ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೋರಾನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಕೋವಿಡ್ ಲಸಿಕೆ ಪಡೆಯದವರು ಲಸಿಕೆ ಪಡೆದುಕೊಂಡು ಸುರಕ್ಷಿತರಾಗಿರುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಇದ್ದರು.