ನಿಮ್ಮ ಸುದ್ದಿ ಬಾಗಲಕೋಟೆ
ಬೀಳಗಿ ತಾಲೂಕಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ ಮಂಗಳವಾರ ಭೇಟಿ ನೀಡಿ ಹೆರಿಗೆ ವಿಭಾಗ, ವಿವಿಧ ವಾರ್ಡ ಹಾಗೂ ಐಸಿಯು ವಿಭಾಗಗಳ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿರುವ ವೈದ್ಯಾಧಿಕಾರಿಗಳು, ಸಿಬ್ಬಂದಿಗಳ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಖಾಸಗಿಯಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಕೇಳಿದಾಗ ಯಾರು ಖಾಸಗಿಯಾಗಿ ಸೇವೆ ಮಾಡದಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವೈದ್ಯರುಗಳು ತಿಳಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವದಿಲ್ಲ. ಉತ್ತಮ ಚಿಕಿತ್ಸೆ ನೀಡಲಾಗುತ್ತಿರುವ ಬಗ್ಗೆ ತಾಲೂಕಾ ಆಸ್ಪತ್ರೆ ವೈದ್ಯಾಧಿಕಾರಿ ದಯಾನಂದ ಕರೆನ್ನವರ ತಿಳಿಸಿದರು. ತಾಲೂಕಾ ಆಡಳಿತ ಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿ ಸಂದರ್ಭದಲ್ಲಿ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ ಇಂಗಳೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸಮಾ ಮಾಗಿ, ವೈದ್ಯಾಧಿಕಾರಿಗಳಾದ ಡಾ.ಮಹಾಂತೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.