ತಿರುವನಂತಪುರ: 201 ಕೋಟಿ ರು. ಆದಾಯ ತೆರಿಗೆ ಬಾಕಿ ಪಾವತಿಸಬೇಕು ಎಂದು ಕಾಂಗ್ರೆಸ್ ಪಕ್ಷದ 9 ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದ್ದು, ಡಿಸಿಎಂ ಡಿಕೆ ಹೂಡಿಕೆ ಮಾಡಿದ್ದಾರೆ ಎನ್ನಲಾದ ಕೇರಳದ ನ್ಯೂಸ್ ಚಾನಲ್‌ವೊಂದರ ಬ್ಯಾಂಕ್ ಖಾತೆ ತೆರಿಗೆ ಇಲಾಖೆ ಶನಿವಾರ ಸ್ಥಗಿತಗೊಳಿಸಿದೆ.
‘ಜೈ ಹಿಂದ್ ಟೀವಿ’ ಚಾನೆಲ್‌ನ ಮಾತೃ ಸಂಸ್ಥೆಯಾದ ‘ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿ’ಯ ಎಲ್ಲಾ ಬ್ಯಾಂಕ್ ಖಾತೆ ನಿಷ್ಕ್ರಿಯಗೊಳಿಸುವಂತೆ ಕೇಂದ್ರ ಜಿಎಸ್‌ಟಿ ಮಂಡಳಿ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದ್ದು, ಭಾರತ್ ಬ್ರಾಡ್‌ಕಾಸ್ಟಿಂಗ್ ಕಂಪನಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಡಿ.ಕೆ. ಶಿವಕುಮಾರ್ ಅವರ ಹೂಡಿಕೆಗೆ ಸಂಬಂಧಿಸಿ ದಂತೆ ಮಾಹಿತಿ ಕಲೆ ಹಾಕಲು ಇತ್ತೀಚೆಗೆ ಸಿಬಿಐ ನೋಟಿಸ್ ನೀಡಿದ್ದು, ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿರುವಾಗ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಇದರಿಂದಾಗಿ ಚಾನೆಲ್ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲದೇ ಕಳೆದ ವರ್ಷ ಡಿ.22ರಂದು ಸಿಬಿಐ ನೀಡಿದ್ದನೋಟಿಸ್‌ಗೆ ನಾವು ಉತ್ತರಿಸಿದ್ದೇವೆ. ಆದರೂಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.