This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Politics NewsState News

ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿ ನನ್ನ ಸಣ್ಣ ಪಾತ್ರವೂ ಇಲ್ಲ, ನನಗೆ ಸಂಬಂಧವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿ ನನ್ನ ಸಣ್ಣ ಪಾತ್ರವೂ ಇಲ್ಲ, ನನಗೆ ಸಂಬಂಧವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್‌ ಡ್ರೈವ್ ಪ್ರಕರಣದಲ್ಲಿ ನನ್ನ ಸಣ್ಣ ಪಾತ್ರವೂ ಇಲ್ಲ, ನನಗೆ ಸಂಬಂಧವೂ ಇಲ್ಲ. ದೇವೇಗೌಡರ ಕುಟುಂಬಕ್ಕೆ ಕೆಟ್ಟದಾಗಲಿ ಅಂತ ನಾನು ಬಯಸುವವನೂ ಅಲ್ಲ, ಈ ವಿಚಾರದಲ್ಲಿ ನನಗೂ ಬೇಸರವಿದೆ.’ ತಮ್ಮ ವಿರುದ್ಧ ಸತತವಾಗಿ ವಾಗ್ದಾಳಿ ನಡೆಸುತ್ತಿರುವ ಜೆಡಿಎಸ್ ಮುಖ್ಯಸ್ಥ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.

ಈ ಪ್ರಕರಣದ ಬಗ್ಗೆ ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರು ನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಬೇರೆ ಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿನಿರತ ನಾಗಿದ್ದೇನೆ. ನಾನು ಒಂದು ರಾಜಕೀಯ ಪಕ್ಷದ ಅಧ್ಯಕ್ಷ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರಿಸಲಿ ಎಂದರು.

‘ನನ್ನ ಬ್ರದರ್ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ. ಅವರ ಆರೋಪಗಳಿಗೆ ಮುಂದಿನ ಅಧಿವೇಶನದಲ್ಲಿ ಉತ್ತರ ಕೊಡುತ್ತೇನೆ’ ಎಂದೂ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ ಎಂದರು.

Nimma Suddi
";