ಬೆಳಗಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಚಾಲನೆ
ನಿಮ್ಮ ಸುದ್ದಿ ಬಾಗಲಕೋಟ
ಜಿಲ್ಲೆಯ ಮುಧೋಳ್ ತಾಲೂಕಿನ ಬೆಳಗಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಬೆಳಗಲಿಯಿಂದ ನುವಗಾಲವ ರಸ್ತೆ ಸುಧಾರಣೆ ಕಾಮಗಾರಿ, ಬೆಳಗಲಿ- ಅಕ್ಕಿಮರಡಿ ರಸ್ತೆ ಸುಧಾರಣೆ ಕಾಮಗಾರಿ, ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಶುದ್ದ ಕುಡಿಯುವ ನೀರಿನ ಘಟಕವನ್ನು ಡಿಸಿಎಂ ಉದ್ಘಾಟಿಸಿದರು. ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಶುದ್ದಕುಡಿಯುವ ನೀರಿನ ಘಟಕವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಡಿಸಿಎಂ ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್, ವಿವಿಧ ಜನಪ್ರತಿನಿಧಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.