ಲೋಕಾಪುರದಲ್ಲಿ ಎಸ್ ಸಿಪಿ ಟಿಎಸ್ ಪಿ ಯೋಜನೆಯಡಿ ನಿರ್ಮಿಸುತ್ತಿರುವ ಕಾಂಪ್ಲೆಕ್ಸ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಗೋವಿಂದ ಕಾರಜೋಳ
ನಿಮ್ಮ ಸುದ್ದಿ ಬಾಗಲಕೋಟೆ
ಲೋಕಾಪುರದಲ್ಲಿ ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆಯಡಿ 2.39 ಕೋಟಿ ರೂ ವೆಚ್ವದಲ್ಲಿ ನಿರ್ಮಿಸುತ್ತಿರುವ ಕಾಂಪ್ಲೆಕ್ಸ್ ಕಾಮಗಾರಿಯನ್ನು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಕಾಂಪ್ಲೆಕ್ಸ್ 24 ಮಳಿಗೆಗಳು ಹಾಗೂ ಒಂದು ಹಾಲ್ ಅನ್ನು ಹೊಂದಿದೆ. ಈ ಕಾಮಗಾರಿಯನ್ನು ತ್ವರಿತ ಹಾಗೂ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.ಇಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ಸಮುದಾಯದ ಫಲಾನುಭವಿಗಳು ವಾಣಿಜ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸಲು ನೆರವಾಗಲಿದೆ ಎಂದು ಡಿಸಿಎಂ ತಿಳಿಸಿದರು.
ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ರಾಜೇಂದ್ರ , ಎಸ್ ಪಿ ಶ್ರೀ ಲೋಕೇಶ್ ಜಗಲಸರ, ವಿವಿಧ ಅಧಿಕಾರಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.