This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Business NewsNational News

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ: ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ ಹೇಗಿದೆ?

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ: ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ ಹೇಗಿದೆ?

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ಎನ್ನುವುದನ್ನು ನೋಡಿ.
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6660
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,265

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,280
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 58,120

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,600
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,650

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,66,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,26,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 72,650 ಆಗಿದ್ದರೆ ಚೆನ್ನೈ 73,360 ಮುಂಬೈ 72,650 ಹಾಗೂ ಕೋಲ್ಕತ್ತಾದಲ್ಲಿ 72,650 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 72,800 ರೂ. ಆಗಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 919 ರೂ. 9190 ಹಾಗೂ ರೂ. 91,900 ರೂ.ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 96,200 ಆಗಿದ್ದರೆ, ಮುಂಬೈನಲ್ಲಿ ರೂ. 91,700 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 91,700 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 91,700 ಆಗಿದೆ.

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ.