ಬೆಂಗಳೂರು: ಅಯೋಧ್ಯೆ ರಾಮ ಮಂದಿರದ ನಂತರ ಬಿಜೆಪಿ ರಾಮ ಜಪ ಮಾಡುತ್ತ ಲೋಕ ಸಭಾ ಚುನಾವಣೆ ಎದುರಿಸಲು ಮುಂದಾಗಿದೆ ಎಂದು ಕಾಂಗ್ರೆಸ್ ಅನೇಕ ಬಾರಿ ಟೀಕೆ ಮಾಡಿದ್ದು, ಈಗ ಅದೇ ಶ್ರೀರಾಮನ ಹೆಸರಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಹೊಸ ಯೋಜನೆ ರೂಪಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಧಾರ್ಮಿಕ ದತ್ತಿ ಇಲಾಖೆಯಿಂದ ಶ್ರೀರಾಮ ಮಂದಿರಗಳ ಅಭಿವೃದ್ಧಿಗೆ ತಯಾರಿ ಶುರುವಾಗಿದ್ದು, ರಾಜ್ಯದ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡಲು ಸರ್ಕಾರ ಮುಂದಾಗಿದೆ. ಧಾರ್ಮಿಕ ದತ್ತಿ ಇಲಾಖೆಯು, ರಾಜ್ಯದ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ರಾಜ್ಯ ಬಜೆಟ್ನಲ್ಲಿ ಹಣಕ್ಕಾಗಿ ಪ್ರಸ್ತಾವನೆ ಸಲ್ಲಿಸಿದೆ. 100 ರಾಮಮಂದಿರಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಬಿಜೆಪಿಗೆ ಟಕ್ಕರ್ ಕೊಡಲು ಮುಂದಾಗಿದೆ.
ರಾಮನ ವಿರೋಧಿಗಳು, ಹಿಂದೂ ಧರ್ಮ ವಿರೋಧಿಗಳು ಎಂಬ ಹಣೆಪಟ್ಟಿ ಕಿತ್ತೆಸೆಯಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ. ರಾಜ್ಯದಲ್ಲಿನ 100 ಹಳೆಯ, ಪ್ರಸಿದ್ಧ ರಾಮ ಮಂದಿರಗಳ ಜೀರ್ಣೋದ್ಧಾರದ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಬಜೆಟ್ನಲ್ಲಿ ಹಣ ನೀಡುವಂತೆ ಧಾರ್ಮಿಕ ದತ್ತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.
ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ರಾಮಮಂದಿರ ಜೀರ್ಣೋದ್ಧಾರಕ್ಕಾಗಿ ಬಜೆಟ್ನಲ್ಲಿ ಹಣ ಬಿಡುಗಡೆ ಮಾಡಲು ಡಿಮ್ಯಾಂಡ್ ಮಾಡಿದ್ದಾರೆ. ರಾಮ ಎಲ್ಲರಿಗೂ ಸಲ್ಲುವ ದೇವರು, ಒಂದು ಪಕ್ಷದ ದೇವರಲ್ಲ.ರಾಮ ಬಿಜೆಪಿ ಅವ್ರಿಗೆ ಮಾತ್ರ ದೇವರಲ್ಲ ಎಲ್ಲರಿಗೂ ದೇವರು ಎಂದು ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಮೂಲಕ ಶ್ರೀರಾಮನ ಭಕ್ತರ ಓಲೈಕೆಗೆ ಕಾಂಗ್ರೆಸ್ ಮುಂದಾಗಿದೆ ಎಂದು ಮಾಹಿತಿ ಕಂಡು ಬಂದಿದೆ.