This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಉಪಮುಖ್ಯಮಂತ್ರಿ ಬಾಗಲಕೋಟೆ ಜಿಲ್ಲಾ ಪ್ರವಾಸ

ಉಪಮುಖ್ಯಮಂತ್ರಿ ಬಾಗಲಕೋಟೆ ಜಿಲ್ಲಾ ಪ್ರವಾಸ
ಬಾಗಲಕೋಟೆ
ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅ.೩೧ರಿಂದ ನ.೩ರ ವರೆಗೆ ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.೩೧ರಂದು ಬೆಂಗಳೂರಿನಿಂದ ಆಗಮಿಸಲಿರುವ ಅವರು ಸಂಜೆ ೪.೩೦ಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿಯೊಂದಿಗೆ ಜಿಲ್ಲೆಯಲ್ಲಿನ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಬಗ್ಗೆ, ಸಂಕಷ್ಟಕ್ಕೀಡಾದ ಕುಟುಂಬಗಳು ಹಾಗೂ ರೈತರಿಗೆ ಪರಿಹಾರ ವಿತರಿಸುವಲ್ಲಿ ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ನ.೧ರಂದು ಬೆಳಗ್ಗೆ ೮.೫೦ಕ್ಕೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಧ್ವಜಾರೋಹಣ, ಕನ್ನಡ ರಾಜ್ಯೋತ್ಸವ ಸಂದೇಶ ನೀಡಲಿದ್ದು, ಬೆಳಗ್ಗೆ ೧೦.೩೦ಕ್ಕೆ ಪಶುಸಂಗೋಪನಾ ಇಲಾಖೆಯ ಜಿಲ್ಲಾ ಪಶು ಆಸ್ಪತ್ರೆ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಲಿದ್ದಾರೆ. ಮಧ್ಯಾಹ್ನ ಮುಧೋಳ ಮತಕ್ಷೇತ್ರದ ಲೋಕಾಪೂರ ಹೋಬಳಿ ವ್ಯಾಪ್ತಿಯಲ್ಲಿನ ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಗಲ್ಲು, ಭೂಮಿ ಪೂಜೆ ನೆರವೇರಿಸಲಿದ್ದಾರೆ.
ನ.೨ರಂದು ಮುಧೋಳದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ನ.೩ರಂದು ಮುಧೋಳ ತಾಲೂಕಿನ ಬೆಳಗಲಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ ೨ರ ನಂತರ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

";