ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಐಪಿಎಲ್ 2024 ರ ಪಂದ್ಯ ನಂ. 68 ರಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದ್ದು, ಈ ಪಂದ್ಯವು ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯಕ್ಕಾಗಿ, ಆಡುವ XI ನಲ್ಲಿ ಸ್ಟಾರ್ ವೇಗಿ ದೀಪಕ್ ಚಹಾರ್ ಮರಳುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ರೂ. 14 ಕೋಟಿಗೆ ಸಹಿ ಮಾಡಿದ ಚಹಾರ್, ಮೇ 1 ರಿಂದ ಸಿಎಸ್‌ಕೆ ಪರ ಆಡಿಲ್ಲ. ಇಂಜುರಿಗೆ ತುತ್ತಾದ ಪರಿಣಾಮ ಅವರು ಪಂದ್ಯದಿಂದ ಹೊರಗುಳಿದಿದ್ದರು.
ಚಹಾರ್ ಲಭ್ಯತೆಯಿಂದಾಗಿಪವರ್‌ಪ್ಲೇ ಓವರ್‌ಗಳಲ್ಲಿ ಬೌಲಿಂಗ್‌ನ ಹೊರತಾಗಿ, ಬ್ಯಾಟ್‌ನಿಂದಲೂ ಚೆನ್ನೈಗೆ ಲಾಭ ಸಿಗಲಿದೆ. ಐಪಿಎಲ್ 2024 ರ ಆರಂಭಿಕ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಮುಸ್ತಫಿಜುರ್ ರೆಹಮಾನ್ ಮತ್ತು ಶ್ರೀಲಂಕಾದ ವೇಗಿ ಮಥೀಶ ಪತಿರಾನಾ, ತುಷಾರ್ ದೇಶಪಾಂಡೆ ಮತ್ತು ಶಾರ್ದೂಲ್ ಠಾಕೂರ್ ಅನುಪಸ್ಥಿತಿಯಲ್ಲಿ ಸೂಪರ್ ಕಿಂಗ್ಸ್‌ನ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದಾರೆ. ಇವರ ಜೊತೆ ರವೀಂದ್ರ ಜಡೇಜಾ, ಮೊಯಿನ್ ಅಲಿ ಮತ್ತು ಮಹೇಶ್ ತೀಶಾನ ಮೂವರು ಸ್ಪಿನ್ನರ್‌ಗಳಾಗಿದ್ದಾರೆ.
ಬ್ಯಾಟಿಂಗ್‌ನಲ್ಲಿ, ಅಜಿಂಕ್ಯ ರಹಾನೆ ಆಡುವ XI ನಲ್ಲಿ ಅವಕಾಶ ಪಡೆಯುವ ಸಾಧ್ಯತೆಯಿಲ್ಲ, ಅಂದರೆ ನಾಯಕ ರುತುರಾಜ್ ಗಾಯಕ್ವಾಡ್ ನ್ಯೂಝಿಲೆಂಡ್ ಸ್ಟಾರ್ ರಚಿನ್ ರವೀಂದ್ರ ಅವರೊಂದಿಗೆ ಇನ್ನಿಂಗ್ಸ್ ತೆರೆಯಲಿದ್ದಾರೆ. ರಿಚಿನ್ ಐಪಿಎಲ್ ಚೊಚ್ಚಲ ಪಂದ್ಯದಲ್ಲಿ, ಆರ್‌ಸಿಬಿ ವಿರುದ್ಧ 15 ಎಸೆತಗಳಲ್ಲಿ 37 ರನ್ ಗಳಿಸಿದ್ದರು. ಗಾಯಕ್ವಾಡ್ ಐಪಿಎಲ್ 2024 ರಲ್ಲಿ 583 ರನ್‌ಗಳೊಂದಿಗೆ ಪ್ರಮುಖ ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಒಂದೆರಡು ವಾರಗಳಿಗಿಂತ ಹೆಚ್ಚು ಕಾಲ ವಿಶ್ರಾಂತಿ ಕಳೆದುಕೊಂಡ ನಂತರ, ನೆಟ್ಸ್‌ನಲ್ಲಿ ಬೌಲಿಂಗ್ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹೀಗಾಗಿ ಇವರಿಂದ ಆಡುವ ಸಾಧ್ಯತೆ ಹೆಚ್ಚಿದೆ.
ಸಿಎಸ್‌ಕೆ ಈ ಪಂದ್ಯದಲ್ಲಿ ಯಾವುದೇ ಅಂತರದಿಂದ ಗೆಲುವು ಸಾಧಿಸಿದರೆ ಪ್ಲೇ ಆಫ್ಗೆ ಪ್ರವೇಶ ಪಡೆಯಲಿದೆ. ಆದರೆ, ಆರ್‌ಸಿಬಿ 18 ರನ್‌ಗಳಿಗಿಂತ ಹೆಚ್ಚು ಅಂತರದಲ್ಲಿ ಅಥವಾ 18.1 ಓವರ್‌ಗಳಿಗಿಂತ ಒಳಗೆ ಗೆಲ್ಲಬೇಕು. ಇಂದಿನ ಪಂದ್ಯಕ್ಕೆ ಚೆನ್ನೈ ಮಾಸ್ಟರ್ ಪ್ಲಾನ್ ಕೂಡ ರೂಪಿಸಿಕೊಂಡಿದ್ದು, ಬಲಿಷ್ಠ ತಂಡವನ್ನೇ ಕಣಕ್ಕಿಳಿಸಲು ತಯಾರು ನಡೆಸಿದೆ.