ಬೆಂಗಳೂರು: ನರಬಲಿ ಹೆಣ್ಣು ಮಕ್ಕಳ ಬಲಿ ಈಗಲೂ ಇದ್ದು, ಕಾಮಾಕ್ಯದಿಂದ ಕೇರಳದವರೆಗೂ ನರಬಲಿ ನಡೆಯುತ್ತದೆ. ಬಡ ಮಕ್ಕಳನ್ನು, ಒಂಟಿ ಹೆಣ್ಣು ಮಕ್ಕಳನ್ನು ಮತ್ತು ಬಿಕ್ಷುಕರನ್ನು ಇದಕ್ಕೆ ಬಳಸಿಕೊಳ್ಳಲಾಗುತ್ತೆ.
ಕರ್ನಾಟಕದ ಕೆಲವು ರಾಜಕಾರಣಿಗಳು ಈಗಲೂ ನರಬಲಿ ಕೊಡುತ್ತಿದ್ದು, ನೇರವಾಗಿ ಅವರು ಇದರಲ್ಲಿ ಭಾಗಿಯಾಗಲ್ಲ. ಆದರೆ ಈ ಕೆಲಸ ಮಾಡಿಸುತ್ತಾರೆ ಎಂದು ನಿರ್ದೇಶಕ ಅಗ್ನಿ ಶ್ರೀಧರ್ ಆರೋಪ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಂಡುಪಾಳ್ಯ ಗ್ಯಾಂಗ್ ಮೇಲೆ ಕೊಲೆ ಆರೋಪ ಹೊರಿಸಿದರು ಎಂದರು.ದಂಡುಪಾಳ್ಯ ಗ್ಯಾಂಗ್ ಆ ಕೊಲೆಗಳನ್ನು ಮಾಡಿರಲಿಲ್ಲ. ದಂಡುಪಾಳ್ಯ ಸಿನಿಮಾದಲ್ಲಿ ತೋರಿಸುವ ಅಂಶಗಳು ನೈಜವಲ್ಲ. ಕ್ರೀಂ ಸಿನಿಮಾದ ಕಥೆ ನರಬಲಿಗೆ ಸಂಬಂಧಿಸಿದೆ ಎಂದು ತಿಳಿಸಿದರು.
ಇನ್ನು ಅಗ್ನಿ ಶ್ರೀಧರ ಕ್ರೀಂ ಚಿತ್ರದಲ್ಲಿ ನಟಿಸಿದ್ದು, ಡಿ.ಕೆ.ದೇವೇಂದ್ರ, ನಿರ್ಮಿಸಿರುವ ಈ ಸಿನಿಮಾವನ್ನು ಅಭಿಷೇಕ್ ಬಸಂತ್ ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ. ಈ ಚಿತ್ರದ ವಿಷುಯಲ್ ಟ್ರೇಲರ್ ಇತ್ತೀಚೆಗೆ ಎ2 ಮ್ಯೂಸಿಕ್ ಮೂಲಕ ಬಿಡುಗಡೆಯಾಯ್ತು. ಲೇಖಕ ಅಗ್ನಿ ಶ್ರೀಧರ್ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದರು ಎಂದು ಮಾಹಿತಿ ಕಂಡು ಬಂದಿದೆ.