This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ಶಾಸಕರಿಂದ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ

ನಿಮ್ಮ ಸುದ್ದಿ ಬಾಗಲಕೋಟೆ

ಇಳಕಲ್* ತಾಲೂಕಿನ *ಗೋನಾಳ್ ಎಸ್ ಕೆ* ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಗಳನ್ನು ಶಾಸಕರಾದ *ಶ್ರೀ ವಿಜಯಾನಂದ ಎಸ್ ಕಾಶಪ್ಪನವ‌ರ* ಅವರು ವಿತರಿಸಿದರು.

ನೂತನವಾಗಿ ಶಾಸಕರಾದ ಮೇಲೆ ಅವರ ಅಭಿಮಾನಿಗಳು ಕಾರ್ಯಕರ್ತರು ಶಾಲು ಹಾರಗಳನ್ನು ತರುತ್ತಿದ್ದರು. ಹೀಗಾಗಿ *ಸ್ವತಃ ಶಾಸಕರೇ ಶಾಲು ಹೂವಿನ ಹಾರಗಳ ಬದಲಾಗಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳನ್ನು ನೀಡಿ ಎಂದು ಕರೆ ನೀಡಿದ್ದರು*. ಹೀಗಾಗಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಇಂದು ತಾಲೂಕಿನ ಗೋನಾಳ ಎಸ್ ಕೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ *ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ* ಮಾಡುವ ಮೂಲಕ ವಿಶಿಷ್ಟತೆಗೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷರಾದ ಮಹಾಂತೇಶ್ ಕಡಿವಾಲ್, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು, ಶಾಲೆಯ ಮುಖ್ಯ ಗುರುಗಳು ಸಹ ಶಿಕ್ಷಕರು ಉಪಸ್ಥಿತರಿದ್ದರು.

Nimma Suddi
";