This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsNational NewsState News

ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

*ಕರ್ನಾಟಕ್ಕೆ ೫೦ರ ಸಂ

ಬಾಗಲಕೋಟೆ:

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನವೆಂಬರ ೧ ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಜರುಗಿದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ ೭.೩೦ಕ್ಕೆ ಜಿಲ್ಲಾಡಳಿತ ಭವನದ ಮುಂದೆ ಇರುವ ಅಶೋಕ ಸ್ಥಂಬದ ವೃತ್ತದಿಂದ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ೯ ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ನಾಡಿನ ಸಾಹಿತ್ಯ, ಇತಿಹಾಸ, ಸಂಸ್ಕೃತಿಯನ್ನು ಬಿಂಬಿಸುವAತ ಸ್ಥಬ್ದ ಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನು ಆಹ್ವಾನಿಸುವಂತೆ ಸಂಬAಧಿಸಿದ ಇಲಾಖೆಗಳಿಗೆ ತಿಳಿಸಲಾಯಿತು. ಕಾರ್ಯಕ್ರಮ ಸಿದ್ದತೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯ ಸದಸ್ಯರ ಕರ್ತವ್ಯಗಳ ಬಗ್ಗೆ ಸಭೆ ಕರೆದು ಕಾರ್ಯಕ್ರಮ ರೂಪು ರೇಶೆಗಳನ್ನು ತಯಾರಿಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟç ಗೀತೆ, ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಯನ್ನು ಹಾಡಿಸುವ ವ್ಯವಸ್ಥೆಯನ್ನು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಕನ್ನಡಾಂಬೆಗೆ ನುಡಿನಮನ ಸಲ್ಲಿಸಲು ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆಯವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕರವರ ಹೊತ್ತಿತೋ ಹೊತ್ತಿತು ಕನ್ನಡದ ದೀಪ, ಚನ್ನವಿರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹಾಡುಗಳ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಾದ್ಯಂತ ಶಾಲಾ, ಕಾಲೇಜು, ವಿಶ್ವವಿದ್ಯಾಲಯ, ಸರಕಾರಿ, ಅರೆಸರಕಾರಿ, ನಿಗಮ ಮಂಡಳಿಗಳ ಕಚೇರಿ, ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳು ಸಹ ರಾಜ್ಯೋತ್ಸವ ಆಚರಣೆಯಲ್ಲಿ ಕಡ್ಡಾಯವಾಗಿ ಕನ್ನಡದ ಹಾಡುಗಳನ್ನು ಹಾಡಿ, ಕನ್ನಡಾಂಬೆಗೆ ನಮನ ಸಲ್ಲಿಸಲು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣ ಹಾಗೂ ಮೆರವಣಿಗೆ ಸ್ಥಳಗಳನ್ನು ಸ್ವಚ್ಛವಾಗಿಡಬೇಕು. ಶುದ್ದ ಕುಡಿಯುವ ನೀರು, ವೇದಿಕೆ, ವಿದ್ಯುತ್, ಧ್ವನಿವರ್ಧಗಳ ಹಾಗೂ ಜನರೇಟರ, ಆಸನಗಳ ವ್ಯವಸ್ಥೆಗಳ ಜೊತೆಗೆ ಪೋಲಿಸ್ ಬಂದೋಬಸ್ತಿ ವ್ಯವಸ್ಥೆ ಮಾಡಲು ತಿಳಿಸಿದರು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ, ಗಣ್ಯರಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡುವದರ ಜೊತೆಗೆ ಕಾರ್ಯಕ್ರಮಕ್ಕೆ ಶಾಲಾ ಮಕ್ಕಳಿಗೆ ಹಳೆ ಬಾಗಲಕೋಟೆಯಿಂದ ನವನಗರಕ್ಕೆ ಬಂದು ಹೋಗಲು ಬಸ್ಸಿನ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಲಾಯಿತು.

ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಯಿತು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡರು.

ಜಿಲ್ಲೆಯಾದ್ಯಂತ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಜೊತೆಗೆ ಜಿಲ್ಲೆಯಲ್ಲಿ ಸಮರ್ಪಕ ಕನ್ನಡ ಅನುಷ್ಠಾನ ಹಾಗೂ ಕನ್ನಡದಲ್ಲಿಯೇ ನಾಮಫಲಕ ಕಡ್ಡಾಯವಾಗಿ ಅಳವಡಿಕೆಗೆ ಕ್ರಮವಹಿಸುವಂತೆ ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡವು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಸ್ವಾಗತಿಸಿ, ಕೊನೆಗೆ ವಂಧಿಸಿದರು.

ಕರ್ನಾಟಕ ಸಂಭ್ರಮ ೫೦’ ಕುರಿತು ಪ್ರಬಂಧ ಸ್ಪರ್ಧೆ
————————————
ಕರ್ನಾಟಕ ಸಂಭ್ರಮ ೫೦ರ ಆಚರಣೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ‘ಕರ್ನಾಟಕ ಸಂಭ್ರಮ ೫೦’ ಎಂಬ ವಿಷಯ ಮೇಲೆ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಹ ಭಾಗವಹಿಸಬಹುದಾಗಿದೆ. ವಯಸ್ಸಿಗೆ ನಿರ್ಭಂಧವಿಲ್ಲ. ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಕನ್ನಡದಲ್ಲಿ ಶುದ್ದ ಕೈಬರಹ ಅಥವಾ ನುಡಿ ಇಲ್ಲವೇ ಯುನಿಕೋಡ ತಂತ್ರಾAಶದಲ್ಲಿ ಬೆರಳಚ್ಚು ಮಾಡಿರಬೇಕು. ೫೦೦ ಪದಗಳಿಗೆ ಮೀರಿರದಂತೆ ಪ್ರಬಂಧಗಳನ್ನು ರಚಿಸಬೇಕು. ರಚಿಸಿದ ಪ್ರಬಂಭಗಳನ್ನು ಅಕ್ಟೋಬರ ೩೦ ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನವನಗರ, ಬಾಗಲಕೋಟೆ ಇವರಿಗೆ ಸಲ್ಲಿಸಬೇಕು.

Nimma Suddi
";