This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsPolitics NewsState News

ಬರ ನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು : ಸಚಿವ ತಿಮ್ಮಾಪೂರ

ಬರ ನಿರ್ವಹಣೆಗೆ ಜಿಲ್ಲಾಡಳಿತ ಸಜ್ಜು : ಸಚಿವ ತಿಮ್ಮಾಪೂರ

ಬಾಗಲಕೋಟೆ

ಜಿಲ್ಲೆಯಲ್ಲಿ  ಬರದ ಛಾಯೆ ಆವರಿಸಿದ್ದು, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಜಿಲ್ಲಾಡಳಿತ ನಿರ್ವಹಣೆ ಮಾಡಲು ಎಲ್ಲ ರೀತಿಯಿಂದ ಸಜ್ಜಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಬರ ನಿರ್ವಹಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಸಜ್ಜೆ, ತೊಗರಿ, ಉದ್ದು, ಹೆಸರು, ಸೂರ್ಯಕಾಂತಿ, ಶೇಂಗಾ, ಸೊಯಾ ಅವರೆ, ಹತ್ತಿ, ಕಬ್ಬು ಸೇರಿದಂತೆ ತೋಟಗಾರಿಕೆ ಬೆಳಗಳಾದ ಈರುಳ್ಳಿ, ಮೆಣಸಿನಕಾಯಿ ಹಾಗೂ ಅರಿಶಿಣ ಬೆಳಗಳು ತೀವ್ರ ತೇವಾಂಶ ಕೊರತೆಯಿಂದ ಹಾನಿಗೊಂಡಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 2,36,552 ಹೆಕ್ಟರ್ ವಿವಿಧ ಕೃಷಿ ಬೆಳೆಗಳು ಬಿತ್ತನೆಯಾಗಿದ್ದು, ಈ ಪೈಕಿ 1,54,482 ಹೆಕ್ಟೆರ್ ಕ್ಷೇತ್ರದಲ್ಲಿ ಶೇ.65 ರಷ್ಟು ಬೆಳೆ ಹಾನಿಗೊಳಾಗಿದೆ. 46,585 ಹೆಕ್ಟೆರ್ ಕ್ಷೇತ್ರದಲ್ಲಿ ವಿವಿಧ ತೋಟಗಾರಿಕೆ ಬೆಳೆಗಳು ಇದ್ದು, ಅದರಲ್ಲಿ 39,623 ಹೆಕ್ಟರ್ ಕ್ಷೇತ್ರ ಶೇ.85 ರಷ್ಟು ಬೆಳೆ ಹಾನಿಯಾಗಿವೆ. ಕೃಷಿ ಮತ್ತು ತೋಟಗಾರಿಕೆ ಸೇರಿ ಒಟ್ಟು ಅಂದಾಜು 1998 ಕೋಟಿ ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ ಜಿಲ್ಲೆಯಿಂದ 265 ಕೋಟಿ ರೂ. ಇನ್‍ಪುಟ್ ಸಬ್ಸಿಡಿ ಕೋರಿ ಕೇಂದ್ರ ಸರಕಾರಕ್ಕೆ ಮೆಮೊರೆಂಡಮ್ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ 9 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರಕಾರ ಘೋಷಿಸಿದ್ದು, ಬರಪೀಡಿತ ಪ್ರದೇಶಗಳಿಗೆ ಕೇಂದ್ರದ ತಂಡ ಭೇಟಿ ನೀಡಿ ಅವಲೋಕನ ಮಾಡಿದೆ. ಜಿಲ್ಲೆಯಲ್ಲಿ ಸದ್ಯ ನೀರಿನ ಸಮಸ್ಯೆ ಸದ್ಯ ಇಲ್ಲ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು 4,244 ಬೋರವೆಲ್‍ಗಳ ಮೂಲಕ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿದೆ. ಯಾವುದೇ ಹಳ್ಳಿ, ನಗರ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 199 ಗ್ರಾಮಗಳ ಸಂಭವನೀಯ ಪಟ್ಟಿ ತಯಾರಿಸಿದ್ದು, ಪರಿಸ್ಥಿತಿಯನ್ನು ಎದುರಿಸಲು ಕ್ರಮವಹಿಸಲಾಗಿದೆ ಎಂದರು.

ಜಾನುವಾರುಗಳಿಗೆ ಅವಶ್ಯವಿರುವ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಲು 35245 ಮೇವಿನ ಕಿರುಪೊಟ್ಟಣ ವಿತರಣೆ, 15 ಮೇವಿನ ಬ್ಯಾಂಕ್ ಸ್ಥಾಪನೆ ಹಾಗೂ 10 ಗೋಶಾಲೆಗಳನ್ನು ಪ್ರಾರಂಭಿಸಲು ಕ್ರಮವಹಿಸಲಾಗಿದೆ. ಬರಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಉದ್ಯೋಗ ನೀಡಲು ಜಿಲ್ಲಾಡಳಿತ ಕ್ರಮವಹಿಸಿದ್ದು, ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 43.62 ಲಕ್ಷ ಮಾನವ ದಿನಗಳನ್ನು ಈವರೆಗೆ ಸೃಜನೆ ಮಾಡಲಾಗಿದೆ. ಕೂಲಿಯನ್ನು 100 ದಿನದಿಂದ 150 ಹೆಚ್ಚಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಹ ರಾಜ್ಯದಿಂದ ಕಳುಹಿಸಲಾಗಿದೆ ಎಂದರು.

ಆಲಮಟ್ಟಿ ಜಲಾಶಯದಿಂದ ಮುಳುಗಡೆಯಾದ ಪ್ರದೇಶದಲ್ಲಿ ಮೇವು ಬೆಳೆಯಲು ಕ್ರಮವಹಿಸಲು ತಿಳಿಸಿದ ಸಚಿವರು. ಮುಳುಗಡೆಯ ಯಾವ ಪ್ರದೇಶದಲ್ಲಿ ಮೇವು ಬೆಳೆಯಲು ಅನುಕೂಲವಿರುವ ಪ್ರದೇಶವನ್ನು ಗುರುತಿಸಿ ಮಾಹಿತಿ ನೀಡುವಂತೆ ಯುಕೆಪಿ ಮಹಾವ್ಯವಸ್ಥಾಪಕರಿಗೆ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ತಹಶೀಲ್ದಾರರಿಗೆ ಸೂಚಿನೆ ನೀಡಲಾಗಿದೆ. ಸಮಸ್ಯೆ ಉಂಟಾದಲ್ಲಿ ಅವರೇ ಜವಾಬ್ದಾರರು ಎಂಬ ಎಚ್ಚರಿಗೆ ನೀಡಲಾಗಿದೆ ಎಂದರು.

ಜಿಲ್ಲೆಯು ಬರ ನಿರ್ವಹಣೆಗೆ ಸಶಕ್ತವಾಗಿದ್ದು, ಕುಡಿಯುವ ನೀರಿಗಾಗಿ 25 ಕೋಟಿ ರೂ. ಜಿಲ್ಲಾಡಳಿತದ ಬಳಿ ಇದೆ. 15 ದಿನಗಳಿಗೊಮ್ಮೆ ಸಭೆ ಮೂಲಕ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಕುರಿತು ಚರ್ಚೆ ಮಾಡಲಾಗುತ್ತಿದೆ. ಅಲ್ಲದೇ ಪ್ರತಿ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ. ತಹಶೀಲ್ದಾರರಿಗೆ ಜವಾಬ್ದಾರಿ ನೀಡಿದ್ದು, ಸಮಸ್ಯೆಯಾದಲ್ಲಿ ನೀವೆ ಜವಾಬ್ದಾರರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಎಚ್.ವಾಯ್.ಮೇಟಿ, ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿ.ಪಂ ಸಿಇಓ ಶಶಿಧರ ಕುರೇರ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಾದಾಮಿ ಕ್ಷೇತ್ರದ 18 ಗ್ರಾಮಗಳ ಕುಡಿಯುವ ನೀರಿನ ಪ್ರಸ್ತಾವನೆಗೆ ಅನುಮೋದನೆ

ಬಾದಾಮಿ ಕ್ಷೇತ್ರದ 18 ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕುರಿತು ಸರಕಾರಕ್ಕೆ ವಿಶೇಷ ಪ್ರಸ್ತಾವನೆಯನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಸಲ್ಲಿಸಿದ್ದರು. ಶುಕ್ರವಾರ ನಡೆಸ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ದೊರೆತಿದೆ.

ರನ್ನ ಸಕ್ಕರೆ ಕಾರ್ಖಾನೆ : 40 ವರ್ಷಗಳ ಅವಧಿಗೆ ಲೀಜ್

ಮುಧೋಳ ರನ್ನ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಲೀಜ್ ಮೇಲೆ ಕೊಡಲು ಸರಕಾರ ಅನುಮೋದನೆ ನೀಡಿದ್ದು, ಅದಕ್ಕೆ ಬೇಕಾದ ಹಣಕ್ಕೆ 40 ಕೋಟಿ ರೂ. ಬ್ಯಾಂಕ್ ಗ್ಯಾರಂಟಿ ಸಹ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.

*ವಿವಿಧ ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ*

ಬಾದಾಮಿ, ಹುನಗುಂದ ಹಾಗೂ ಬಾಗಲಕೋಟೆ ತಾಲೂಕಿನ ವಿವಿಧ ಬರ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ ನೀಡಿ ವೀಕ್ಷಣೆ ಮಾಡಿದರು.

";