ಜನರಲ್ಲಿ ಆತ್ಮಸೈರ್ಯ ತುಂಬಿದ ಶಾಸಕರು, ಅಧಿಕಾರಿಗಳು
ನಿಮ್ಮ ಸುದ್ದಿ ಬಾಗಲಕೋಟೆ
ಕೊರೊನಾ ಎರಡನೇ ಅಲೆ ಹಳ್ಳಿಗಳಿಗೂ ಹರಡುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲೂಕಿನ ಶಿರೂರ ಮತ್ತು ಮನ್ನಿಕಟ್ಟಿ ಗ್ರಾಮಗಳಿಗೆ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಪಂ ಸಿಇಓ ಟಿ.ಭೂಬಾಲನ ಭೇಟಿ ನೀಡಿ ಗ್ರಾಮದ ಜನರ ಆರೋಗ್ಯ ವಿಚಾರಿಸಿ ಅವರಿಗೆ ಆತ್ಮಸೈರ್ಯ ತುಂಬುವ ಕಾರ್ಯ ಮಾಡಿದರು.
ಮಂಗಳವಾರ ಭೇಟಿ ನೀಡಿ ಗ್ರಾಮಗಳಲ್ಲಿ ಸಂಚರಿಸಿ ಸ್ಥಿತಿಗತಿ ಪರಿಶೀಲಿಸಿದರು. ಕೋವಿಡ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕೊವಿಡ್ ಲಕ್ಷಣ ಹೊಂದಿದವರಿಗೆ ಔಷಧ ಕಿಟ್ ವಿತರಿಸಿದರು. ಕೋವಿಡ್ ಹಳ್ಳಿಯತ್ತ ವ್ಯಾಪಿಸುತ್ತಿದ್ದು ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ ಶಾಸಕ ವೀರಣ್ಣ ಚರಂತಿಮಠ ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.
ಪಾಜಿಟಿವ್ ಕೇಸ್ ದೃಢಪಟ್ಟವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಸೂಚಿಸಿದರು. ಗ್ರಾಮದ ಆರೋಗ್ಯದ ದೃಷ್ಠಿಯಿಂದ ಬವಿವ ಸಂಘದ ವೈದ್ಯಕೀಯ ಮಹಾವಿದ್ಯಾಲಯದಿಂದ ೯ ಜನ ಎಂಬಿಬಿಎಸ್ ವೈದ್ಯರನ್ನು ಶಿರೂರ ಮತ್ತು ಮನ್ನಿಕೇರಿ ಗ್ರಾಮಗಳಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.
ತಹಸೀಲ್ದಾರ್ ಗುರುಸಿದ್ದಯ್ಯ ಹಿರೇಮಠ, ತಾಲೂಕಾ ಆರೋಗ್ಯಾಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಕಾರಿ ಹಾಗೂ ಕೋವಿಡ್ ನೋಡಲ್ ಅಧಿಕಾರಿ ಮಂಜುನಾಥ ಡೋಂಬರ, ಡಾ.ವಿನೋದ ಹಾದಿಮನಿ, ಗ್ರಾಮಲೆಕ್ಕಿಗ ಆನಂದ ಅಳ್ಳಿಗಿಡದ, ಪಪಂ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ ಇತರರು ಇದ್ದರು.