This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics News

ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

ವಾಯವ್ಯ ಪದವೀಧರ, ಶಿಕ್ಷಕರ ಮತಕ್ಷೇತ್ರದ ಚುನಾವಣೆ-೨೦೨೨

ನಿಮ್ಮ ಸುದ್ದಿ ಬಾಗಲಕೋಟೆ

ಕರ್ನಾಟಕ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಜೂನ್ ೧೩ ರಂದು ಮತದಾನ ನಡೆಯಲಿದ್ದು, ತಹಶೀಲ್ದಾರ ಕಚೇರಿಗಳಲ್ಲಿ ಸ್ಥಾಪಿಸಲಾದ ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ರವಿವಾರ ಭೇಟಿ ನೀಡಿ ಪರಿಶೀಲಿಸಿದರು.

ಬಾಗಲಕೋಟೆ ಹಾಗೂ ಹುನಗುಂದ ತಾಲೂಕಿನ ತಹಶೀಲ್ದಾರ ಕಚೇರಿಯ ಮಸ್ಟರಿಂಗ್ ಕೇಂದ್ರಗಳಲ್ಲಿ ಮತಗಟ್ಟೆಗಳಿಗೆ ಕಳುಹಿಸಬಹುದಾದ ಮತಪೆಟ್ಟಿಗೆ, ಮತದಾನಕ್ಕೆ ಬೇಕಾಗುವ ಎಲ್ಲ ಸಾಮಗ್ರಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಅವರು ಬಾಗಲಕೋಟೆ ತಾಲೂಕಿನಲ್ಲಿ ಒಟ್ಟು ೮ ಮತಗಟ್ಟೆಗಳಿದ್ದು, ಮತಗಟ್ಟೆ ಅಧಿಕಾರಿಗಳಿಗೆ ಬೇಕಾಗುವ ಎಲ್ಲ ಮತದಾನದ ಸಾಮಗ್ರಿಗಳನ್ನು ನೀಡಲಾಗುತ್ತಿದೆ. ಡಿಮಸ್ಟರಿಂಗ್ ಸಹ ಈ ಕೇಂದ್ರದಲ್ಲಿಯೇ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಸನ್ನದ್ದವಾಗಿದೆ. ಮತದಾನ ಸುಗಮ ಹಾಗೂ ಮುಕ್ತವಾಗಿ ಜರುಗಿಸಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜೂನ್ ೧೩ ರಂದು ಬೆಳಿಗ್ಗೆ ೮ ರಿಂದ ಸಂಜೆ ೫ ವರೆಗೆ ಮತದಾನ ನಡೆಯಲಿದೆ. ಚುನಾವಣಾ ಕರ್ತವ್ಯಕ್ಕೆ ೨೯೦ ಜನರನ್ನು ನಿಯೋಜಿಸಲಾಗಿದೆ. ೪೮ ಆರೋಗ್ಯ ಸಿಬ್ಬಂದಿ, ೪೮ ಮೈಕ್ರೋ ಆಬ್ಜರವರ ಹಾಗೂ ೧೧೪ ಜನ ಪೊಲೀಸ್ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿದೆ. ಎಂದು ತಿಳಿಸಿದರು.

ಪದವೀಧರ ಮತಕ್ಷೇತ್ರಕ್ಕೆ ೨೪೩೨೭ ಪುರುಷರು, ೯೩೨೨ ಮಹಿಳೆಯರು ಹಾಗೂ ಇತರೆ ೨ ಸೇರಿ ಒಟ್ಟು ೩೩೬೫೧ ಮತದಾರರಿದ್ದಾರೆ. ಶಿಕ್ಷಕರ ಮತಕ್ಷೇತ್ರಕ್ಕೆ ೩೬೮೦ ಪುರುಷರು, ೧೪೯೩ ಮಹಿಳೆಯರು ಸೇರಿ ಒಟ್ಟು ೫೧೭೩ ಮತದಾರರಿದ್ದಾರೆ ಎಂದು ತಿಳಿಸಿದರು.

ಮತಗಟ್ಟೆಗಳ ವಿವರ

ಜಿಲ್ಲೆಯಲ್ಲಿ ಒಟ್ಟು ೩೨ ಮತಗಟ್ಟೆಗಳು ಹಾಗೂ ಹೆಚ್ಚುವರಿ ೧೬ ಸೇರಿ ೪೮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಬಕವಿ-ಬನಹಟ್ಟಿ, ಜಮಖಂಡಿ ತಾಲೂಕಿನಲ್ಲಿ ತಲಾ ೭, ಮುಧೋಳ, ಬದಾಮಿ ತಲಾ ೬, ಬೀಳಗಿ ೫, ಗುಳೇದಗುಡ್ಡ, ಹುನಗುಂದ ತಲಾ ೨, ಇಲಕಲ್ಲ ೨ ಹಾಗೂ ಬಾಗಲಕೋಟೆ ತಾಲೂಕಿನಲ್ಲಿ ೧೦ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ೧೧ ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ೧೧ ಕಡೆ ವೆಬ್ ಕ್ಯಾಸ್ಟಿಂಗ್ ಹಾಗೂ ೨೩ ಮತಗಟ್ಟೆಗಳಲ್ಲಿ ವಿಡಿಯೋ ಗ್ರಾಫಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮತದಾನಕ್ಕೆ ವಿಶೇಷ ಸಾಂಧರ್ಭಿಕ ರಜೆ
ಸರಕಾರದ ಆದೇಶದನ್ವಯ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು, ಸಹಕಾರಿ ರಂಗದ ಸಂಘ ಸಂಸ್ಥೆ, ಎಲ್ಲ ವ್ಯವಹಾರಿಕ ಸಂಸ್ಥೆ, ಔದ್ಯಮಿಕ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಮತ ಚಲಾಯಿಸುವ ಮತದಾರರಿಗೆ ಜೂನ್ ೧೩ ಸೋಮವಾರದಂದು ವಿಶೇಷ ಸಾಂಧರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನಕ್ಕೆ ಪರ್ಯಾಯ ಗುರುತಿನ ಚೀಟಿ
ಮತದಾನ ಪಟ್ಟಿಯಲ್ಲಿ ಹೆಸರಿರುವ ಮತದಾರರು ಭಾರತ ಚುನಾವಣಾ ಆಯೋಗದ ಗುರುತಿನ ಚೀಟಿ, ಆಧಾರ ಕಾರ್ಡ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ, ಇಂಡಿಯನ್ ಪಾಸಪೋರ್ಟ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ನೌಕರಿ ನೀಡಿರುವ ಸೇವಾ ಗುರುತೀನ ಚೀಟಿ, ಲೋಕಸಭೆ, ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರಿಗೆ ಕಚೇರಿಯಿಂದ ನೀಡಲಾದ ಗುರುತೀನ ಚೀಟಿ, ಶಿಕ್ಷಕರ ಮತಕ್ಷೇತ್ರಕ್ಕೆ ಅರ್ಹ ಶಿಕ್ಷಕರಿಗೆ ಶಿಕ್ಷಣ ಸಂಸ್ಥೆಗಳಿAದ ನೀಡಲಾದ ಸೇವಾ ಗುರುತಿನ ಚೀಟಿಯನ್ನು ಬಳಸಬಹುದಾಗಿದೆ.

ಮತಗಟ್ಟೆ ಇರುವ ಶಾಲಾ, ಕಾಲೇಜು, ಕಚೇರಿಗಳಿಗೆ ರಜೆ
ಜಿಲ್ಲೆಯಲ್ಲಿ ೪೮ ಮತಗಟ್ಟೆಗಳಲ್ಲಿ ಜೂನ್ ೧೩ ರಂದು ಮತದಾನ ನಡೆಯಲಿದ್ದು, ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಗೆ ಯಾವುದೇ ಶಾಂತತಾ ಭಂಗ ಬಾರದಂತೆ ಸುಸೂತ್ರವಾಗಿ ಜರುಗಿಸಲು ಮತಗಟ್ಟೆ ಇರುವ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಿಗೆ ಜೂನ್ ೧೩ ರಂದು ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಿ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

Nimma Suddi
";