This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local NewsPolitics NewsState News

ಅಧಿಕಾರಿಗಳ ಜೊತೆ ಜಿಲ್ಲಾ ಚುನಾವಣಾಧಿಕಾರಿ ಸಭೆ

ಅಧಿಕಾರಿಗಳ ಜೊತೆ ಜಿಲ್ಲಾ ಚುನಾವಣಾಧಿಕಾರಿ ಸಭೆ

ಬಾಗಲಕೋಟೆ

ಲೋಕಸಭಾ ಚುನಾವಣೆ-2024ಕ್ಕೆ ಘೋಷಣೆಯಾಗುವ ಸಾದ್ಯತೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಅಧಿಕಾರಿಗಳ ಜೊತೆ ಪೂರ್ವ ಸಿದ್ದತಾ ಸಭೆ ನಡೆಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು ಚುನಾವಣಾ ಕಾರ್ಯಕ್ರಮ ನಿಯೋಜನೆಗೊಂಡ ಪ್ರತಿಯೊಂದ ಅಧಿಕಾರಿ ಹಾಗೂ ಸಿಬ್ಬಂದಿಗಳು ಪ್ರಾಮಾಣಿಕವಾಗಿ, ಜವಾಬ್ದಾರಿಯಿತವಾಗಿ ಕೆಲಸ ನಿರ್ವಹಿಸಬೇಕು.

ಇಂದಿನಿಂದಲೇ ನಿಮ್ಮ ವರ್ತನೆ ಹಾಗೂ ಮನೋಭಾವನೆ ಬದಲಾವಣೆ ಮಾಡಿಕೊಂಡು ಕೆಲಸ ನಿರ್ವಹಿಸಬೇಕು. ಅನುಮತಿ ಪಡೆಯದೇ ರಜೆಯ ಮೇಲೆ ತೆರಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಚುನಾವಣೆಗೆ ಘೋಷಣೆ ಸಾಧ್ಯತೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಬ್ಯಾನರ್, ಪೋಸ್ಟರಗಳ ಜೊತೆಗೆ ಸರಕಾರದ ಅಭಿವೃದ್ದಿ ಕಾರ್ಯಕ್ರಮಗಳ ಪ್ರಚಾರ ಫಲಕಗಳನ್ನು ತೆರವುಗೊಳಿಸಬೇಕು.

ಗೋಡೆ ಬರಹಗಳು ಇದ್ದಲ್ಲಿ ಅವುಗಳು ಕಾಣದಂತೆ ಮಾಡಲು ಸೂಚಿಸಿದ ಅವರು ಜಿಲ್ಲೆಯಲ್ಲಿ ಈವರೆಗೆ ಕೈಗೊಂಡ ಚುನಾವಣಾ ಪೂರ್ವ ಸಿದ್ದತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವರದಿ ಹಾಗೂ ಶೌಚಾಲಯ ಸೂಸ್ಥಿತಿಯಲ್ಲಿ ಇರುವ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಈಗಾಗಲೇ ನಡೆದಿರುವ ಕಾಮಗಾರಿಗಳ ಕೆಲಸಗಳಿಗೆ ಯಾವುದೇ ತೊಂದರೆ ಇರುವದಿಲ್ಲ. ಆದರೆ ಹೊಸದಾಗಿ ಕಾಮಗಾರಿಗಳಿಗೆ ಅನುಮೋದನೆ ಕೊಡುವುದಾಗಲಿ ಇಲ್ಲವೇ ಅಧಿಸೂಚನೆ ಹೊರಡಿಸುವುದಾಗಲಿ ಮಾಡುವಂತಿಲ್ಲ. ಚುನಾವಣೆ ಸಂದರ್ಭದಲ್ಲಿ ಉಡುಗೊರೆ, ಲಿಕ್ಕರ ಹಾಗೂ ಹಣದ ಮೇಲೆ ಹೆಚ್ಚಿನ ನಿಗಾ ವಹಿಸತಕ್ಕದ್ದು. ಇದರ ಬಗ್ಗೆ ಮಾನಿಟರ್ ಆಗಲಿದೆ ಎಂದರು.

ಚುನಾವಣಾ ಕಾರ್ಯದಲ್ಲಿ ತಂಡವಾಗಿ ಕಾರ್ಯನಿರ್ವಹಿಸಬೇಕು. ಮತಗಟ್ಟೆಗಳಿಗೆ ಭೇಟಿ ನೀಡಿ ಶೌಚಾಲಯ ಸುಸ್ಥಿತಿಯಲ್ಲಿ ಇರುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿಳು ಪರಿಶೀಲಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.ವಿಶೇಷ ಮತಗಟ್ಟೆಗಳ ಸ್ಥಾಪನೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸಲು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ ಚುನಾವಣಾ ಘೋಷಣೆ ಪೂರ್ವದಲ್ಲಿಯೇ ಚೆಕ್‍ಪೋಸ್ಟಗಳನ್ನು ಸ್ಥಾಪಿಸಲಾಗಿದ್ದು, ಚುನಾವಣೆ ಘೋಷಣೆ ಆಗುತ್ತಿರುವ ಹಿನ್ನಲೆಯಲ್ಲಿ ಇನ್ನು ಮುಂದೇ ನೂರಕ್ಕೆ ನೂರರಷ್ಟು ಕೆಲಸ ನಿರ್ವಹಿಸಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಸಿಇಓ ಹಾಗೂ ತಾವುಗಳು ಅನಿರೀಕ್ಷಿತವಾಗಿ ಚೆಕ್‍ಪೋಸ್ಟಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು. ಚುನಾವಣಾ ಸಂದರ್ಭಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ, ರಂಜಾನ ಹಾಗೂ ಹೋಳಿ ಹಬ್ಬಗಳು ಸಹ ಬರುತ್ತಿರುವುದರಿಂದ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ,

ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಸಂತೋಷ ಕಾಮಗೌಡ, ಎನ್‍ಐಸಿಯ ಗಿರಿಯಾಚಾರ ಸೇರಿದಂತೆ ಚುನಾವಣಾ ಕಾರ್ಯಕ್ಕೆ ನೇಮಕಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಇತರರು ಉಪಸ್ಥಿತರಿದ್ದರು.

Nimma Suddi
";