This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local NewsPolitics NewsState News

ಜಿಲ್ಲಾ ಮಟ್ಟದ ಜನತಾ ದರ್ಶನ : ಜನರ ಸಮಸ್ಯೆಗೆ ಸ್ಪಂಧಿಸಿದ ಸಚಿವರು

ಜಿಲ್ಲಾ ಮಟ್ಟದ ಜನತಾ ದರ್ಶನ : ಜನರ ಸಮಸ್ಯೆಗೆ ಸ್ಪಂಧಿಸಿದ ಸಚಿವರು

ಬಾಗಲಕೋಟೆ

ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ತಿವ್ರ ಪರಿಹಾರ ಕಲ್ಪಿಸುವ ಮೂಲಕ ಜನರ ಬಳಿಯಲ್ಲಿಯೇ ಆಡಳಿತ ವ್ಯವಸ್ಥೆ ತರುವ ಉದ್ದೇಶ ಸರಕಾರದ್ದಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಸಮಸ್ಯೆ ಅಧಿಕಾರಿಗಳ ಬಳಿ ಕಗ್ಗಂಟಾಗಿ ಇರಬಾರದು ಎನ್ನುವುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ. ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಜನತಾ ದರ್ಶನ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಪದೇ ಪದೇ ಕಚೇರಿಗೆ ಜನ ಅಲೆಯುವುದು ತಪ್ಪಬೇಕು. ಸಮಸ್ಯೆ ತಂದಾಗ ಸಹಾನುಭೂತಿಯಿಂದ ಆಲಿಸಿ ಅವರನ್ನು ಪ್ರೀತಿಯಿಂದ ಕಾಣಬೇಕು. ಇದು ನಮ್ಮ ಸರಕಾರ ಎಂಬ ಭಾವನೆ ಅವರಲ್ಲಿ ಬರುವಂತೆ ಅಧಿಕಾರಿಗಳ ಕೆಲಸ ಮಾಡಬೇಕು. ಜನತೆ ಸಮಸ್ಯೆ ತಂದಾಗ ಅದಕ್ಕೆ ಪರಿಹಾರ ದೊರೆಯಬೇಕು. ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿಗಳ ಇಚ್ಚೆಗೆ ಚ್ಯೂತಿ ಬಾರದ ರೀತಿಯಲ್ಲಿ ಅಹವಾಲು ತೀವ್ರವಾಗಿ ಬಗೆಹರಿಸುವ ಕಾರ್ಯವಾಗಬೇಕು ಎಂದರು.

ಮುಖ್ಯಮಂತ್ರಿಗಳ ಮುಂದಾಲೋಚನೆ, ಬಡವರ ಮೇಲಿದ್ದ ಅವರ ಕಾಳಜಿಯಿಂದ ನಾಡಿನ ಜನತೆಯ ಕೊನೆಯ ವ್ಯಕ್ತಿಗೂ ಹಸಿವಿನಿಂದ ಬಳಲಬಾರದೆಂದು ಅನ್ನಭಾಗ್ಯ ಯೋಜನೆ, ಮನೆಯನ್ನು ಬೆಳಗುವ ಬೆಳಕಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಗೃಹಿಣಿ ತನ್ನ ಮನೆಯ ಜವಾಬ್ದಾರಿ ನಿರ್ವಹಿಸಲು ಪ್ರತಿ ಕುಟುಂಬದ ಯಜಮಾನಿಗೆ ೨ ಸಾವಿರ ರೂ. ನೀಡುವ ಗೃಹಲಕ್ಷಿö್ಮÃ ಯೋಜನೆ, ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಸೌಲಭ್ಯ ಹಾಗೂ ನಿರುದ್ಯೋಗಿಗಳಿಗೆ ಸಹಾಯಧನ ನೀಡುವ ಯುವನಿಧಿ ಯೋಜನೆ ಜಾರಿಗೆ ತರಲಾಗಿದೆ ಎಂದರು.

ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ತಾಲೂಕಾ ಮಟ್ಟದಲ್ಲಿಯೂ ಹಮಿಕೊಳ್ಳಲಾಗುತ್ತಿದ್ದು, ಬರುವ ಅಕ್ಟೋಬರ ೧೦ ರಂದು ತೇರದಾಳದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಭಾಗದ ಜನ ತಮ್ಮ ಅಹವಾಲುಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದರು. ಸಾದ್ಯವಾದಷ್ಟು ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಒದಗಿಸುವ ಕಾರ್ಯ ಜನತಾ ದರ್ಶನದಲ್ಲಿ ಮಾಡಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಪ್ರಾಸ್ತಾವಿಕವಾಗಿ ಮಾತನಾಡಿದವರು. ಕಾರ್ಯಕ್ರಮದಲ್ಲಿ ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಶಾಸಕರಾದ ವಿಜಯಾನಂದ ಕಾಶಪ್ಪನವರ, ಜಗದೀಶ ಗುಡಗುಂಟಿ, ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್, ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಉಪ ವಿಭಾಗಾಧಿಕಾರಿಗಳಾದ ಶ್ವೇತಾ ಬೀಡಿಕರ, ಸಂತೋಷ ಕಾಮಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಜನರ ಅಹವಾಲುಗಳಿಗೆ ಸ್ಪಂಧಿಸಿದ ಸಚಿವರು
ಜನತಾ ದರ್ಶನ ಕಾರ್ಯಕ್ರಮದಲ್ಲಿ ನೂರಾರು ಜನ ಹೊತ್ತು ತಂದ ಸಮಸ್ಯೆಗಳಿಗೆ ಸಚಿವ ಆರ್.ಬಿ.ತಿಮ್ಮಾಪೂರ ಸ್ಪಂಧಿಸುವ ಮೂಲಕ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಿದರು. ಕಾರ್ಯಕ್ರಮದಲ್ಲಿ ವಿಧವಾ ವೇತನ, ಗೃಹಲಕ್ಷಿö್ಮÃ, ಅಂಗನವಾಡಿ ಕಟ್ಟಡ, ಅಂಗನವಾಡಿಗೆ ಫ್ರಿಡ್ಜ್ ವ್ಯವಸ್ಥೆ, ವಸತಿ ನಿಲಯಕ್ಕೆ ಪ್ರವೇಶ, ಪೋಡಿ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬAಧಿಸಿದ ಒಟ್ಟು ೬೧೪ ಅಹವಾಲುಗಳು ಸ್ವೀಕೃತಗೊಂಡಿದ್ದವು. ಪ್ರತಿಯೊಂದು ಅಹವಾಲುಗಳಿಗೆ ಸ್ವೀಕೃತಿ ನೀಡಲಾಯಿತು. ಅರ್ಜಿ ಸ್ವೀಕೃತಿಗೆ ಹಲವಾರು ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿತ್ತು.

 

";