ಬಾಗಲಕೋಟೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ 25 ರಂದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆ.10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜರಗುವ ಕಾರ್ಯಕ್ರಮವನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಾಸಕ ಎಚ್.ವಾಯ್.ಮೇಟಿ ವಹಿಸಲಿದ್ದು,
ಮುಖ್ಯ ಅತಿಥಿಗಳಾಗಿ ನವದೆಹಲಿಯ ವಿಶೇಷ ಪ್ರತಿನಿಧಿ-1 ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.